ಟ್ವಿಟ್ಟರ್, ವಾಟ್ಸಪ್ ಹಾಗೂ ಜಾಲತಾಣಗಳ ಮೇಲೆ ಪೊಲೀಸರು ತೀವ್ರ ನಿಗಾ ವಹಿಸಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸುವ ನೆಪದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದ ಹಾಳು ಮಾಡುವ ಪೋಸ್ಟ್ ಗಳನ್ನು ಯಾರಾದರೂ ಹರಿಬಿಟ್ಟರೆ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ.
ಹೀಗಂತ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಆರ್. ದಿಲೀಪ್ ಎಚ್ಚರಿಕೆ ನೀಡಿದ್ದಾರೆ.
ಫೇಸ್ಬುಕ್, ವಾಟ್ಸ್ ಆಪ್, ಟ್ವಿಟ್ಟರ್ ಮತ್ತಿತರ ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಗೇಡಿಗಳು ಏನಾದರು ಪೋಸ್ಟ್ ಮಾಡಿ ಶಾಂತತೆಯನ್ನು ಹದಗೆಡಿಸುತ್ತಾರೆ ಎಂಬುವುದರ ಸಲುವಾಗಿ ಹು-ಧಾ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.
ಯಾವುದೇ ಒಂದು ಕೋಮು ಪರವಾಗಿ ಮತ್ತೊಂದು ಕೋಮಿನ ವಿರುದ್ಧವಾದ ಪೋಸ್ಟ್ಗಳನ್ನು ಮಾಡಿದರೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು. ಈಗಾಗಲೇ ಪ್ರಚೋದನಾಕಾರಿ ಪೋಸ್ಟ್ ಮಾಡಿರುವ ಕೆಲ ಯುವಕರನ್ನು ಗುರುತಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದಿದ್ದಾರೆ.