ನಡು ರಸ್ತೆಯಲ್ಲಿ ಯುವತಿಯೊಬ್ಬಳಿಗೆ ಕಿಸ್ ಕೊಟ್ಟು ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ನಗರದ ಅನಂದಪುರ ಬಡಾವಣೆಯ ನಿವಾಸಿಯಾದ 27 ವರ್ಷ ವಯಸ್ಸಿನ ಆರೋಪಿ ಸಂತೋಷ್ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಇಂದಿರಾ ನಗರದ ಎಲೆಕ್ಟ್ರಿಕ್ ಶಾಪ್ವೊಂದರಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂತೋಷ್, ಜೀವನ್ ಭೀಮಾ ನಗರದ ಬಸ್ ನಿಲ್ದಾಣದಲ್ಲಿ ಕ್ಯಾಬ್ಗಾಗಿ ಕಾಯುತ್ತಾ ನಿಂತಿದ್ದ ಉತ್ತರಪ್ರದೇಶ ಮೂಲದ ಯುವತಿಗೆ ಕಿಸ್ ಕೊಟ್ಟು ಪರಾರಿಯಾಗಿದ್ದನು.
ಆರೋಪಿಯ ವಿರುದ್ಧ ಯುವತಿ ಜೀವನ್ ಭೀಮಾ ನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ದೂರಿನನ್ವಯ ತನಿಖೆ ನಡೆಸಿದ ಪೊಲೀಸರು ಆರೋಪಿ ಸಂತೋಷ್ನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ.
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.