ಬೆಳಗಾವಿ : ಕರ್ನಾಟಕದಲ್ಲಿ ಈ ಬಾರಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೆ ಮುಂದಿನ 5 ವರ್ಷಗಳಲ್ಲಿ 10 ಲಕ್ಷ ಯುವಕರಿಗೆ ಉದ್ಯೋಗಾವಕಾಶ ನೀಡಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದರು.
ಬೆಳಗಾವಿಯಲ್ಲಿ ನಡೆದ `ಯುವಕ್ರಾಂತಿ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ, 5 ವರ್ಷಗಳಲ್ಲಿ 10 ಲಕ್ಷ ಯುವಕರಿಗೆ ಉದ್ಯೋಗ ನೀಡಲಿದೆ. ಜೊತೆಗೆ ಸರ್ಕಾರಿ ಇಲಾಖೆಗಳಲ್ಲಿ ಖಾಲಿಯಿರುವ 2.5 ಲಕ್ಷ ಉದ್ಯೋಗವನ್ನು ರಾಜ್ಯದ ಯುವಜನರಿಗೆ ಸಿಗುವಂತೆ ಮಾಡಲಿದೆ ಎಂದು ಘೋಷಣೆ ಮಾಡಿದರು.
ಮುಂದುವರಿದು ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು ಕುಟುಂಬಕ್ಕೆ 10 ಕೆಜಿ ಅಕ್ಕಿ ಉಚಿತ, 200 ಯೂನಿಟ್ ವಿದ್ಯುತ್ ಉಚಿತ, ಕುಟುಂಬದ ಓರ್ವ ಮಹಿಳೆಗೆ 2 ಸಾವಿರ ರೂ. ನೀಡಲಾಗುವುದು ಎಂದು ಅವರು ಭರವಸೆ ನೀಡಿದರು.