ಖಾಸಗಿ ಬಸ್ ಚಾಲಕನೊಬ್ಬನಿಗೆ ಯುವಕರ ಗುಂಪೊಂದು ಪೊಲೀಸರ ಸಮ್ಮುಖದಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ನಡೆದಿದೆ. ಖಾಸಗಿ ಬಸ್ ಚಾಲಕನ ಮೇಲೆ ಯುವಕರ ಗುಂಪೊಂದು ಹಲ್ಲೆ ಮಾಡಿದೆ. ಹುಬ್ಬಳ್ಳಿಯ ಗ್ಲಾಸ್ ಹೌಸ್ ಬಳಿ ಈ ಘಟನೆ ನಡೆದಿದೆ.
ಪೊಲೀಸರ ಸಮ್ಮುಖದಲ್ಲಿಯೇ ಘಟನೆ ನಡೆದಿದ್ದರೂ ಕಂಡು ಕಾಣದಂತೆ ಪೊಲೀಸರು ನಡೆದುಕೊಂಡರು ಎಂದು ಸಾರ್ವಜನಿಕರು ದೂರಿದ್ದಾರೆ. ಬೈಕ್ ಗೆ ಖಾಸಗಿ ಬಸ್ ಢಿಕ್ಕಿ ಹೊಡೆದಿದೆ. ಹೀಗಾಗಿ ಬೈಕ್ ಸವಾರನ ಕಾಲಿಗೆ ಗಾಯವಾಗಿದೆ. ಈ ಹಿನ್ನೆಲೆಯಲ್ಲಿ ಅಲ್ಲಿಯೇ ಇದ್ದ ಯುವಕರ ಗುಂಪೊಂದು ಚಾಲಕನ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಬಸ್ ನಲ್ಲಿದ್ದ ವಸ್ತುಗಳನ್ನು ಜಖಂಗೊಳಿಸಿದ್ದಾರೆ. ಸ್ಥಳೀಯರು ಹಲ್ಲೆ ಮಾಡುತ್ತಿರುವ ಸಂದರ್ಭದಲ್ಲಿ ಮೊಬೈಲ್ ನಲ್ಲಿ ಚಿತ್ರಿಕರಣ ಮಾಡಿಕೊಂಡಿದ್ದಾರೆ.
ಮದ್ಯರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಪಘಾತವಾದರೆ ಕಾನೂನು ಪ್ರಕಾರ ಹೋರಾಟ ಮಾಡಬೇಕು. ಅದು ಬಿಟ್ಟು ಚಾಲಕನ ಮೇಲೆ ಮನಬಂದಂತೆ ಥಳಿಸಿದ್ದು ಯಾವ ನ್ಯಾಯ ಎಂದು ಸಾರ್ವನಿಕರು ಪ್ರಶ್ನೆ ಮಾಡುತ್ತಿದ್ದಾರೆ. ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.