ಕಾವೇರಿ ವಿಷಯದಲ್ಲಿ ದ್ವಂದ್ವ ನಿಲುವು ತಾಳಿರುವ ಬಿಜೆಪಿ ನಾಯಕರು ಹಾಗೂ ಪ್ರಧಾನಿ ಮೋದಿ ವಿರುದ್ಧ ಕನ್ನಡದ ಯುವ ಸಮೂಹ ಕಿಡಿಕಾರಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸುಪ್ರೀಂ ಕೋರ್ಟ್ ಆದೇಶ ಧಿಕ್ಕರಿಸುವ ತಾಕತ್ ಇಲ್ಲ. ನೀರಾವರಿ ಸಚಿವ ಎಂ.ಬಿ.ಪಾಟೀಲ್ ಹಾಗೂ ರಾಜ್ಯ ಪರ ವಕೀಲ ನಾರಿಮನ್ ಅವರನ್ನು ಬದಲಾಯಿಸುವಂತೆ ಬಿಜೆಪಿ ಆಗ್ರಹಿಸಿದೆ. ಆದರೆ, ಅವರನ್ನು ಬದಲಾಯಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ನಿನ್ನೆ ಸಿಎಂ ನೇತೃತ್ವದಲ್ಲಿ ನಡೆದ ಸರ್ವಪಕ್ಷ ಸಭೆಯನ್ನು ಬಿಜೆಪಿ ಬಹಿಷ್ಕರಿಸಿತ್ತು.
ಈ ಹಿನ್ನೆಲೆಯಲ್ಲಿ "ಮೋದಿ ಮೋಸ" ಎನ್ನುವ ಹೆಸರಿನ ಟ್ವಿಟರ್ ಹಾಗೂ ಫೇಸ್‌ಬುಕ್‌ನಲ್ಲಿ ಬಿಜೆಪಿ ನಾಯಕರು ಹಾಗೂ ಪ್ರಧಾನಿ ಮೋದಿ ವಿರುದ್ಧ ಯುವ ಸಮೂಹ ಸಮರ ಸಾರಿದೆ.
ಕಾವೇರಿ ವಿಷಯದಲ್ಲಿ ಬಿಜೆಪಿ ನಾಯಕರು ಡಬಲ್ ಗೇಮ್ ಆಡುತ್ತಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆ ನಡೆಯುತ್ತಿದೆ.
ರಾಜ್ಯದ ಸಂಸದರನ್ನು ಪ್ರಧಾನಿ ಮೋದಿ ಆರಿಸಿಲ್ಲ. ಬದಲಾಗಿ ರಾಜ್ಯದ ಆರು ಕೋಟಿ ಕನ್ನಡಿಗರು ಅವರನ್ನು ಆರಿಸಿ ಲೋಕಸಭೆಗೆ ಕಳುಹಿಸಿದ್ದಾರೆ. ಮೋದಿ ಬಲೂಚಿಸ್ತಾನದ ಕುರಿತು ಮಾತನಾಡುತ್ತಾರೆ. ಆದರೆ, ಉಭಯ ರಾಜ್ಯಗಳ ನಡುವಿನ ಸಮಸ್ಯೆ ಕುರಿತು ಮಾತನಾಡುತ್ತಿದ್ದಾರಾ ಎಂದು ಜಾಲತಾಣಿಕರು ಬಿಜೆಪಿಯನ್ನು ಹಿಗ್ಗಾಮುಗ್ಗಾ ಜಾಡಿಸುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ