ವಿಧಾನಪರಿಷತ್ ಸದಸ್ಯ ಗೋವಿಂದರಾಜು ಡೈರಿಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹೆಸರಿದೆ ಎಂದು ಕೇಳಿದ ಮಾಧ್ಯಮದವರ ವಿರುದ್ದ ಗರಂ ಆದ ಸಿಎಂ ಸಿದ್ದರಾಮಯ್ಯ ನಿಮ್ಮ ಹತ್ರ ದಾಖಲಾತಿ ಇದೆ ಏನ್ರೀ ಎಂದು ಗುಡುಗಿದ ಘಟನೆ ನಡೆದಿದೆ.
ಎಂಎಲ್‌ಸಿ ಗೋವಿಂದರಾಜು ಡೈರಿಯಲ್ಲಿ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯವರ ಹೆಸರು ಉಲ್ಲೇಖವಾಗಿದೆ ಎನ್ನುವ ಮಾಧ್ಯಮದವರ ಪ್ರಶ್ನೆಯಿಂದ ಆಕ್ರೋಶಗೊಂಡ ಸಿಎಂ ಸಿದ್ದರಾಮಯ್ಯ, ನಿಮ್ಮ ಬಳಿ ದಾಖಲಾತಿ ಇದೆ ಏನ್ರೀ? ಇದೆಲ್ಲಾ ಸುಳ್ಳು ಎಂದು ಕೋಪದಿಂದ ಹೊರನಡೆದಿದ್ದಾರೆ.
ಎಂಎಲ್‌ಸಿ ಗೋವಿಂದರಾಜು ಮನೆಯಲ್ಲಿ ದೊರೆತ ಡೈರಿಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಒಂದು ವೇಳೆ ಸಂಬಂಧವಿದ್ದಲ್ಲಿ ಕೇಂದ್ರ ಸರಕಾರದ ಆಧೀನದಲ್ಲಿರುವ ಐಟಿ ಇಲಾಖೆ ಎರಡು ವರ್ಷಗಳಿಂದ ಏನು ಮಾಡುತ್ತಿದೆ ಎಂದು ತಿರುಗೇಟು ನೀಡಿದ್ದಾರೆ.
ಡೈರಿಯ ಬಗ್ಗೆ ಅನುಮಾನವಿದ್ದಲ್ಲಿ ಕೇಂದ್ರ ಸರಕಾರ ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಬಹಿರಂಗಪಡಿಸಲಿ. ಅದರಲ್ಲಿ ಸತ್ಯಾಂಶ ಇಲ್ಲ ಎನ್ನುವ ಕಾರಣಕ್ಕೆ ಕೇಂದ್ರ ಸರಕಾರ ಮೌನವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.