ಹಳ್ಳಿಗಳ ಸಮಸ್ಯೆ ತೆಗೆದುಕೊಂಡು ನೂರಾರು ಕಿಲೋಮೀಟರ್ ದೂರದಿಂದ ಬಂದು ಸಚಿವರ ಮನೆ ಮುಂದೆ ನಾಯಿ ತರಾ ಕಾಯಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಸದಸ್ಯರು ಕೆಪಿಸಿಸಿ ಕಾರ್ಯಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ತರಾಟೆಗೆ ತೆಗೆದುಕೊಂರು.
ಬೆಂಗಳೂರಿನ ದೇವರಾಜ್ ಅರಸು ಭವನದಲ್ಲಿ ನಡೆಯುತ್ತಿರುವ ಗ್ರಾಮ ಸ್ವರಾಜ್ ಕಾರ್ಯಕ್ರಮ ನಡೆಯಿತು. ಈ ವೇಳೆ ಕಾಂಗ್ರೆಸ್ ಸರಕಾರ ಮಹಿಳೆಯರಿಗೆ 50 ಪ್ರತಿಶತ ಮೀಸಲಾತಿ ನೀಡಿದೆ ಎಂದು ಹೇಳುತ್ತದೆ. ಆದರೆ, ಮಹಿಳೆಯರಿಗೆ ಎಲ್ಲಿ ಏಷ್ಟು ಪ್ರತಿಶತ ಮೀಸಲಾತಿ ನೀಡಿದ್ದೀರಿ ತೋರಿಸಿ. ಕೇವಲ ಹಣ ನೀಡುವವರಿಗೆ 'ಬಿ' ಫಾರಂ ನೀಡಲಾಗುತ್ತಿದೆ ಎಂದು ಆರೋಪಿಸಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಸದಸ್ಯರು ಕೆಪಿಸಿಸಿ ಕಾರ್ಯಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಬಹಿರಂಗವಾಗಿ ತರಾಟೆಗೆ ತೆಗೆದುಕೊಂಡರು.
ಕಾಂಗ್ರೆಸ್ ಘಟಕಕ್ಕೂ ರಾಜ್ಯ ಸರಕಾರಕ್ಕೂ ಸಂಬಂಧವೇ ಇಲ್ಲದಂತಾಗಿದೆ. ನಮ್ಮ ಸಮಸ್ಯೆಗಳಿಗೆ ಸಚಿವದ್ವಯರು ಕ್ಯಾರೆ ಎನ್ನುವುದಿಲ್ಲ ಎಂದು ತಾಲೂಕು ಪಂಚಾಯತ್ ಸದಸ್ಯರು ಆರೋಪಿಸಿದ್ದಾರೆ. ಈ ವೇಳೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರು ಮಧ್ಯ ಪ್ರವೇಶಿಸಿ ವಾತಾರಣವನ್ನು ತಿಳಿಗೊಳಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ