ರೋಗಿ ಸಂಖ್ಯೆ-610ರ ನೇರ ಸಂಪರ್ಕಕ್ಕೆ ಬಂದ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಜನತೆಯಲ್ಲಿ ಆತಂಕ ಶುರುವಾಗಿದೆ.
ಕಲಬುರಗಿ ನಗರದ ರೋಗಿ ಸಂಖ್ಯೆ-610 ರ ನೇರ ಸಂಪರ್ಕಕ್ಕೆ ಬಂದ ಗಾಜೀಪುರ ಪ್ರದೇಶದ 52 ವರ್ಷದ ವ್ಯಕ್ತಿಗೆ ಕೊರೋನಾ ಸೋಂಕು ದೃಢವಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ಹೇಳಿದ್ದಾರೆ.
ಕಲಬುರಗಿ ಜಿಲ್ಲೆಯಲ್ಲಿ ಕೊರೋನಾ ಪೀಡಿತ 64 ರೋಗಿಗಳಲ್ಲಿ 6 ಜನ ನಿಧನರಾಗಿದ್ದಾರೆ. 24 ರೋಗಿಗಳು ಗುಣಮುಖರಾಗಿ ಅಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಉಳಿದಂತೆ 34 ರೋಗಿಗಳಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದ್ದಾರೆ.