ಉಡುಪಿ : ಏ.23 ರಂದು ನಡೆಯುವ 3ನೇ ಹಂತದ ಮತದಾನದ ಬಹಿರಂಗ ಪ್ರಚಾರಕ್ಕೆ ನಿನ್ನೆ ತೆರೆಬಿದ್ದ ಹಿನ್ನಲೆಯಲ್ಲಿ ಸಿಎಂ ಕುಮಾರಸ್ವಾಮಿ ಪ್ರಚಾರ ಕಾರ್ಯವನ್ನು ಮುಗಿಸಿ ವಿಶ್ರಾಂತಿ ಪಡೆಯಲು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.
ಎರಡನೇ ಹಂತದ ಮತದಾನ ವೇಳೆ ಮಂಡ್ಯ ಕ್ಷೇತ್ರ ಸೇರಿದಂತೆ ಹಲವು ಅಭ್ಯರ್ಥಿಗಳ ಪರ ನಡೆಸಿದ ಸಿಎಂ ಕುಮಾರಸ್ವಾಮಿ ಏ.23 ರಂದು ನಡೆಯುವ 3ನೇ ಹಂತದ ಮತದಾನಕ್ಕಾಗಿ ಶಿವಮೊಗ್ಗದಲ್ಲಿ ಮಧು ಬಂಗಾರಪ್ಪ ಸೇರಿದಂತೆ ಮೈತ್ರಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದರು. ನಿನ್ನೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದು ಸದ್ಯಕ್ಕೆ ಸಿಎಂ ವಿಶ್ರಾಂತಿ ತೆಗೆದುಕೊಳ್ಳಲು ಮುಂದಾಗಿದ್ದಾರೆ.
ಉಡುಪಿಯ ಹೆಲ್ತ್ ರೆಸಾರ್ಟ್ ಆಗಿರುವ ಕಾಪುವಿನ ಮೂಳೂರುನಲ್ಲಿರುವ ಸಾಯಿರಾಧಾ ರೆಸಾರ್ಟಿನಲ್ಲಿ ಸಿಎಂ ಎಚ್.ಡಿ.ಕೆ ಮೂರು ದಿನ ವಿಶ್ರಾಂತಿ ಪಡೆಯಲಿದ್ದಾರೆ. ಈ ಅವಧಿಯಲ್ಲಿ ಪಂಚಕರ್ಮ ಚಿಕಿತ್ಸೆ, ಧ್ಯಾನ, ಯೋಗದಲ್ಲಿ ಸಿಎಂ ಪಾಲ್ಗೊಳ್ಳಲಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.