Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಸಿದ್ದರಾಮಯ್ಯ ಹೆಸರಿನಲ್ಲಿ ಕೋಮುಭಾವನೆ ಕೆರಳಿಸುವ ಸುದ್ದಿ ಹಂಚಿಕೆ: ದೂರು ನೀಡಿದ ಸಿಎಂ

ಸಿದ್ದರಾಮಯ್ಯ ಹೆಸರಿನಲ್ಲಿ ಕೋಮುಭಾವನೆ ಕೆರಳಿಸುವ ಸುದ್ದಿ ಹಂಚಿಕೆ: ದೂರು ನೀಡಿದ ಸಿಎಂ

Sampriya

ಬೆಂಗಳೂರು , ಬುಧವಾರ, 10 ಏಪ್ರಿಲ್ 2024 (14:15 IST)
ಬೆಂಗಳೂರು: ಕಾಂಗ್ರೆಸ್ ನಂಬಿಕೆ ಇಟ್ಟಿರುವುದು ಮುಸ್ಲಿಂ ಓಟುಗಳನ್ನು, ಕಾಂಗ್ರೆಸ್ ಪಕ್ಷವು ಹಿಂದೂಗಳ ಓಟನ್ನು ನಂಬಿಕೊಂಡಿಲ್ಲ ಎಂದು ನಾನು ಹೇಳಿರುವುದಾಗಿ ಸುಳ್ಳು ಸುದ್ದಿಯನ್ನು ಹಬ್ಬಿಸಲಾಗಿದೆ. ಅವರ ವಿರುದ್ಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಕಾಂಗ್ರೆಸ್ ಕಾರ್ಯಕರ್ತರು ಹಿಂದುತ್ವದ ಮೇಲೆ ನಂಬಿಕೆ ಇಡಬಾರದು ಎಂದು ಸಿದ್ದರಾಮಯ್ಯ ಅವರು ಖಾಸಗಿ ಸಭೆಯೊಂದರಲ್ಲಿ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದ್ದು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟೀಕರಣವನ್ನ ನೀಡಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು,  ಬಿಜೆಪಿ, ಜೆಡಿಎಸ್‌ ಮಿತ್ರಮಂಡಳಿ ಕೃಪಾಪೋಷಿತ ಕಿಡಿಗೇಡಿಗಳು ವಾರ್ತಾಪತ್ರಿಕೆಯನ್ನು ಹೋಲುವ ಸುಳ್ಳು ಸುದ್ದಿಯ ತುಣುಕೊಂದನ್ನು ಸೃಷ್ಟಿಸಿ, ಅದರಲ್ಲಿ ಜನರ ಕೋಮುಭಾವನೆ ಕೆರಳಿಸುವ ಸುದ್ದಿಯನ್ನು ತುಂಬಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ಬಗ್ಗೆ ಈಗಾಗಲೇ ನಾನು ಪೊಲೀಸ್‌ ಇಲಾಖೆಗೆ ದೂರು ನೀಡಿದ್ದೇನೆ. ಇದರ ಹಿಂದಿರುವ ದುಷ್ಟ ಶಕ್ತಿ ಯಾರು ಎಂಬ ಬಗ್ಗೆ ನಮಗೆ ಮಾಹಿತಿ ಇದ್ದು, ಆದಷ್ಟು ಬೇಗನೆ ಅವರನ್ನು ನ್ಯಾಯದ ಕೈಗಳಿಗೆ ಒಪ್ಪಿಸಲಾಗುವುದು.

ರಾಜಕೀಯ ವಿರೋಧಿಗಳನ್ನು ನ್ಯಾಯಸಮ್ಮತ ರೀತಿಯಲ್ಲಿ ಎದುರಿಸಲಾಗದೆ ಇಂತಹ ಅಡ್ಡದಾರಿ ಮೂಲಕ ಚುನಾವಣೆ ಗೆಲ್ಲಲು ಹೊರಟಿರುವುದು @BJP4Karnataka
 ಮತ್ತು ಜೆಡಿಎಸ್‌ನ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ. ಹತ್ತು ವರ್ಷಗಳ ಕಾಲ ದೇಶದ ಆಡಳಿತ ನಡೆಸಿದ ಪಕ್ಷವೊಂದು ಚುನಾವಣೆ ಗೆಲ್ಲಲು ಸುಳ್ಳು ಸುದ್ದಿಯ ಮೊರೆ ಹೋಗುವಂತಹ ಹೀನಾಯ ಸ್ಥಿತಿಗೆ ತಲುಪಬಾರದಿತ್ತು.

ಸುಳ್ಳು ಸುದ್ದಿಗಳನ್ನು ನಂಬಿ ಶೇರ್‌ ಮಾಡುವ ಮುನ್ನ ಎಚ್ಚರಿಕೆ ವಹಿಸಿ....!!
ಸುಳ್ಳು ಸುದ್ದಿಯ ಸೃಷ್ಟಿಕರ್ತರು, ಅವರ ಬೆನ್ನ ಹಿಂದೆ ಬೆಂಬಲಕ್ಕೆ ನಿಂತಿರುವವರು ಹೀಗೆ ಫೇಕ್‌ ಫ್ಯಾಕ್ಟರಿಯನ್ನು ಕಾನೂನಿನ ಮೂಲಕ ಬೇರು ಸಹಿತ ಕಿತ್ತೆಸೆಯುತ್ತೇವೆ.




Share this Story:

Follow Webdunia kannada

ಮುಂದಿನ ಸುದ್ದಿ

ನವರಾತ್ರಿ ವೇಳೆ ಫಿಶ್ ತಿಂದ ತೇಜಸ್ವಿಯಾದವ್: ಬಿಜೆಪಿ ಟೀಕೆ