ಬೆಂಗಳೂರು: ಕಾಂಗ್ರೆಸ್ ಸರ್ಕಾರ ಉರುಳುವ ಭೀತಿಯಲ್ಲಿದೆ. ಸಿಎಂ ಸಿದ್ಧರಾಮಯ್ಯ ಕುರ್ಚಿ ಕಳೆದುಕೊಳ್ಳಲು ಕೌಂಟ್ ಡೌನ್ ಶುರುವಾಗಿದೆ ಎಂದು ಚಾಮರಾಜನಗರದಲ್ಲಿ ಬಿಜೆಪಿ ಸಂಸದ ಬಿ. ಶ್ರೀರಾಮುಲು ಹೇಳಿದ್ದಾರೆ.
ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲುವ ಭೀತಿಗೆ ಒಳಗಾಗಿದೆ. ಇದಕ್ಕಾಗಿಯೇ ಅಧಿವೇಶನ ಬಿಟ್ಟು, ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಸಿಎಂ ಸಿದ್ಧರಾಮಯ್ಯಗೆ ಈಗ ಕುರ್ಚಿ ಉಳಿಸಿಕೊಳ್ಳುವ ಚಿಂತೆ ಶುರುವಾಗಿದೆ ಎಂದು ರಾಮುಲು ಟಾಂಗ್ ಕೊಟ್ಟಿದ್ದಾರೆ.
ನಂಜನಗೂಡು ಮತ್ತು ಗುಂಡ್ಲುಪೇಟೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭದ್ರಕೋಟೆ ನಿರ್ಮಿಸಿರಬಹುದು. ಆದರೆ ಈ ಬಾರಿ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವುದು ನಿಶ್ಚಿತ ಎಂದು ರಾಮುಲು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ