Publish Date: Sun, 31 Mar 2019 (10:52 IST)
Updated Date: Tue, 02 Apr 2019 (14:45 IST)
ಬೆಂಗಳೂರು : ಈ ಹಿಂದೆ ಜೆಡಿಎಸ್ ಬೆಂಬಲಿಗರ ಮೇಲೆ ಐಟಿ ದಾಳಿ ನಡೆದರ ಬಗ್ಗೆ ಮೊದಲೆ ಟ್ವೀಟ್ ಮಾಡಿ ಸೂಚನೆ ನೀಡಿದ ಸಿಎಂ ಕುಮಾರಸ್ವಾಮಿ ಇದೀಗ ಟ್ವೀಟ್ ಮಾಡಿ ರಾಜ್ಯದಲ್ಲಿ ಮತ್ತೆ ಐಟಿ ದಾಳಿ ನಡೆಯುವುದಾಗಿ ಮತ್ತೆ ಬಾಂಬ್ ಸಿಡಿಸಿದ್ದಾರೆ.
ತಮ್ಮ ಟ್ವೀಟರ್ ನಲ್ಲಿ, ‘ಐಟಿ ಅಧಿಕಾರಿಗಳು ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡು ದಾಳಿ ಮುಂದುವರಿಸಿದ್ದಾರೆ. ಮಂಡ್ಯದ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಅಕ್ಕಿ ಗಿರಣಿಗಳ ಮೇಲೆ ಬೆಳಗಿನ ಜಾವ 4 ಗಂಟೆ ವರೆಗೆ ದಾಳಿ ಮಾಡಿ ಸ್ಪೈ ಕ್ಯಾಮೆರಾ ಅಳವಡಿಸಿದ್ದಾರೆ. ರೈಲ್ವೆ ಅಧಿಕಾರಿಗಳ ಸೋಗಿನಲ್ಲಿ ಕಾರು ಕಾರು ಬಾಡಿಗೆ ಪಡೆದಿದ್ದಾರೆ’ ಎಂದು ಟ್ವೀಟ್ ಮಾಡಿದ್ದಾರೆ.
ಇದೇ ವೇಳೆ ಅವರು ಇನ್ನೊಂದು ಟ್ವೀಟ್ ನಲ್ಲಿ, ‘ಮೈಸೂರಿನ ಸಿಎಫ್ ಟಿಆರ್ ಐ ನಲ್ಲಿ ತಂಗಿರುವ ಅಧಿಕಾರಿಗಳು ಕಾರ್ಯಕರ್ತರನ್ನು ಬೆದರಿಸಲು ಈ ತಂತ್ರ ಹೆಣೆದಿದ್ದಾರೆ. ಕೇಂದ್ರ ಸರ್ಕಾರದ ನೇರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಈ ತಂತ್ರವನ್ನು ಬಲವಾಗಿ ಖಂಡಿಸುತ್ತೇನೆ. ಚುನಾವಣಾ ಆಯೋಗ ಕೂಡಲೇ ಮಧ್ಯ ಪ್ರವೇಶಿಸುವ ಅಗತ್ಯವಿದೆ’ ಅಂತ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.