Publish Date: Thu, 18 Apr 2019 (15:44 IST)
Updated Date: Thu, 18 Apr 2019 (15:45 IST)
ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ವಿಫಲವಾದ ಜಿಲ್ಲಾಡಳಿತದ ಕ್ರಮ ಖಂಡಿಸಿ ಜನರು ಮತದಾನ ಬಹಿಷ್ಕಾರ ಮಾಡಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮತ್ತೊಂದು ಕಡೆ ಮತದಾನ ಬಹಿಷ್ಕಾರ ಮಾಡಲಾಗಿದೆ.
ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆಯಲ್ಲಿ ಚಿಂತಾಮಣಿ ತಾಲ್ಲೂಕಿನ ಎಗವ ಮಿಂಡಿಗಲ್ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ ಹಾಕಲಾಗಿದೆ.
ನೂರಾರು ಬಿಂದಿಗೆಗಳನ್ನು ಹಿಡಿದು ಪ್ರತಿಭಟನೆಯನ್ನು ಮಹಿಳೆಯರು ಮಾಡಿದ್ರು. ಕಳೆದ ನಾಲ್ಕೈದು ತಿಂಗಳಿಂದ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಸ್ಥರು, ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ಹಲವು ಬಾರಿ ಮನವಿ ಮಾಡಿದರೂ ಕ್ರಮ ಕೈಗೊಳ್ಳದ ಜಿಲ್ಲಾಡಳಿತದ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ನಿರ್ಲಕ್ಷ್ಯದಿಂದ ಬೇಸತ್ತು ಮತದಾನ ಬಹಿಷ್ಕಾರ ಹಾಕುವುದಾಗಿ ಅಲ್ಲಿನ ಜನ್ರು ತಿಳಿಸಿದ್ದಾರೆ.