ಬೆಂಗಳೂರು (ಸೆ.01): ಬಂಗಾರದ ಮೇಲೆ ಹೂಡಿಕೆ ಮಾಡೋದು ಒಂದು ರೀತಿ ಭದ್ರತೆಯ ಪ್ರತೀಕ. ಇಂದು ಕೊಂಡ ಒಂದಿಷ್ಟೇ ಬಂಗಾರ ಕೆಲ ಸಮಯದ ನಂತರ ಭಾರೀ ಲಾಭ ತಂದುಕೊಡುತ್ತದೆ.
ಬಹುಶಃ ಹಣದುಬ್ಬರದ ಪ್ರತೀ ಏರಿಳಿಕೆಯಲ್ಲೂ ಉತ್ತಮ ಬೆಲೆ ಕಾಯ್ದಿರಿಸಿಕೊಂಡಿರುವ ಏಕೈಕ ವಸ್ತು ಚಿನ್ನವೇ. ಹಾಗಾಗಿ ಪ್ರತಿದಿನ ದಿನಕ್ಕೆರಡು ಬಾರಿ ಚಿನ್ನದ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಏರಿಳಿತವಾದರೂ ಜನರಿಗೆ ಅದರಲ್ಲಿ ಆಸಕ್ತಿ ಒಂಚೂರೂ ಕಡಿಮೆ ಆಗೋದೇ ಇಲ್ಲ. ಒಂದು ಕಡೆ ಹೂಡಿಕೆಯ ರೂಪದಲ್ಲಿ ಚಿನ್ನಕ್ಕೆ ಡಿಮ್ಯಾಂಡ್ ಇದ್ದರೆ, ಮತ್ತೊಂದೆಡೆ ಆಭರಣ ಕೊಳ್ಳಲು ಭಾರತೀಯರೂ ಸೇರಿದಂತೆ ನಾನಾ ದೇಶಗಳ ಜನರಿಗೆ ಹೆಚ್ಚಿನ ಆಸಕ್ತಿ ಇರುತ್ತದೆ. ಇವೆಲ್ಲವೂ ಸೇರಿ ಪ್ರತಿದಿನದ ಚಿನ್ನದ ಬೆಲೆಯ ಮೇಲೆ ಎಲ್ಲರಿಗೂ ಒಂದು ಕಣ್ಣು ಇದ್ದೇ ಇರುತ್ತದೆ.
ನಿನ್ನೆಯಿಂದ ಚಿನ್ನದ ಬೆಲೆಯಲ್ಲಿ ಇಳಿಕೆ ಕಾಣುತ್ತಿದ್ದು, ಆಭರಣ ಪ್ರಿಯರಿಗೆ ಖುಷಿ ಕೊಟ್ಟಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 46,500 ರೂ. ಇತ್ತು. ಇಂದು 46,380 ರೂ.ಗೆ ಇಳಿಕೆಯಾಗಿದೆ. ಅದೇ ರೀತಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಇಳಿಕೆ ಕಂಡಿದೆ. ನಿನ್ನೆ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 47,500 ರೂ. ಇತ್ತು. ಇಂದು 47,380 ರೂಪಾಯಿಗೆ ಇಳಿಕೆ ಆಗಿದೆ.