Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಗೌರಿ ಹಬ್ಬಕ್ಕೆ ಚಿನ್ನ ಖರೀದಿಸುವವರಿಗೆ ಸಿಹಿ ಸುದ್ದಿ

ಗೌರಿ ಹಬ್ಬಕ್ಕೆ ಚಿನ್ನ ಖರೀದಿಸುವವರಿಗೆ ಸಿಹಿ ಸುದ್ದಿ
ಬೆಂಗಳೂರು , ಬುಧವಾರ, 8 ಸೆಪ್ಟಂಬರ್ 2021 (09:22 IST)
ಬಂಗಾರದ ಮೇಲೆ ಹೂಡಿಕೆ ಮಾಡೋದು ಒಂದು ರೀತಿ ಭದ್ರತೆಯ ಪ್ರತೀಕ. ಇಂದು ಕೊಂಡ ಒಂದಿಷ್ಟೇ ಬಂಗಾರ ಕೆಲ ಸಮಯದ ನಂತರ ಭಾರೀ ಲಾಭ ತಂದುಕೊಡುತ್ತದೆ. ಬಹುಶಃ ಹಣದುಬ್ಬರದ ಪ್ರತೀ ಏರಿಳಿಕೆಯಲ್ಲೂ ಉತ್ತಮ ಬೆಲೆ ಕಾಯ್ದಿರಿಸಿಕೊಂಡಿರುವ ಏಕೈಕ ವಸ್ತು ಚಿನ್ನವೇ. ಹಾಗಾಗಿ ಪ್ರತಿದಿನ ದಿನಕ್ಕೆರಡು ಬಾರಿ ಚಿನ್ನದ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಏರಿಳಿತವಾದರೂ ಜನರಿಗೆ ಅದರಲ್ಲಿ ಆಸಕ್ತಿ ಒಂಚೂರೂ ಕಡಿಮೆ ಆಗೋದೇ ಇಲ್ಲ.

ಒಂದು ಕಡೆ ಹೂಡಿಕೆಯ ರೂಪದಲ್ಲಿ ಚಿನ್ನಕ್ಕೆ ಡಿಮ್ಯಾಂಡ್ ಇದ್ದರೆ, ಮತ್ತೊಂದೆಡೆ ಆಭರಣ ಕೊಳ್ಳಲು ಭಾರತೀಯರೂ ಸೇರಿದಂತೆ ನಾನಾ ದೇಶಗಳ ಜನರಿಗೆ ಹೆಚ್ಚಿನ ಆಸಕ್ತಿ ಇರುತ್ತದೆ. ಇವೆಲ್ಲವೂ ಸೇರಿ ಪ್ರತಿದಿನದ ಚಿನ್ನದ ಬೆಲೆಯ ಮೇಲೆ ಎಲ್ಲರಿಗೂ ಒಂದು ಕಣ್ಣು ಇದ್ದೇ ಇರುತ್ತದೆ.
ಕಳೆದ ಮೂರು ದಿನಗಳಿಂದ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ಭಾರೀ ಇಳಿಕೆ ಕಂಡಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 46,530 ರೂ. ಇತ್ತು. ಇಂದು ಅದೇ ಚಿನ್ನ 46,410 ರೂ.ಗೆ ಇಳಿಕೆಯಾಗಿದೆ. ಅದೇ ರೀತಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಇಳಿಕೆಯಾಗಿದೆ. ನಿನ್ನೆ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 47,530 ರೂ. ಇತ್ತು. ಇಂದು 10 ಗ್ರಾಂ ಚಿನ್ನಕ್ಕೆ 47,410 ರೂ. ಆಗಿದೆ. ಇಂದು 10 ಗ್ರಾಂ ಚಿನ್ನಕ್ಕೆ 120 ರೂಪಾಯಿ ಕಡಿಮೆಯಾಗಿದೆ.
ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ  ಇಂದು 48,440 ರೂ.ಆಗಿದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನ 44,400 ರೂ.ಗೆ ಏರಿಕೆಯಾಗಿದೆ. ಹಾಗೆಯೇ ಮೈಸೂರು ಹಾಗೂ ಮಂಗಳೂರಿನಲ್ಲೂ ಇದೇ ಬೆಲೆ ಇದೆ.
ಆಪತ್ಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಇನ್ನೂ ಕಡಿಮೆಯಾಗಿಲ್ಲ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ. ಬೇರೆಲ್ಲ ನಗರಗಳಿಗೆ ಹೋಲಿಸಿದರೆ ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ 50,790 ರೂ.ಇದೆ. ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ವಾಹನ ಮಾರಾಟ ಪ್ರಮಾಣ ಇದೀಗ ಮತ್ತೆ ಏರಿಕೆ