ನವದೆಹಲಿ: ಪ್ರತಿ ತಿಂಗಳು ಮನ್ ಕೀ ಬಾತ್ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೇಡಿಯೋದಲ್ಲಿ ಉದ್ದುದ್ದ ಭಾಷಣ ಮಾಡ್ತಾರೆ. ಒಂದು ದಿನವೂ ಕಾಮ್ ಕೀ ಬಾತ್ ಆಡಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಉತ್ತರ ಪ್ರದೇಶ ಸಿಎಂ ಅಖಿಲೇಶ್ ಯಾದವ್ ವಾಗ್ದಾಳಿ ನಡೆಸಿದ್ದಾರೆ.
ಉತ್ತರ ಪ್ರದೇಶ ಚುನಾವಣೆಯಲ್ಲಿ ಈ ಇಬ್ಬರೂ ನಾಯಕರುಗಳು ಒಂದಾಗಿದ್ದು, ಲಕ್ನೋದಲ್ಲಿ ನಡೆದ ಜಂಟಿ ಸುದ್ಧಿಗೋಷ್ಠಿಯಲ್ಲಿ ಪ್ರಧಾನಿ ಮೋದಿ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಚುನಾವಣೆ ಎಂದರೆ ಜನರ ಭಾವನೆಗಳ ಜತೆ ಆಟವಾಡುವುದಲ್ಲ. ಮಾತನಾಡಿದಷ್ಟು ಸುಲಭವಲ್ಲ.
ಪ್ರಧಾನಿಯವರು ಪ್ರತಿ ತಿಂಗಳು ರೇಡಿಯೋದಲ್ಲಿ ಮನ್ ಕೀ ಬಾತ್ ಆಡುತ್ತಾರೆ. ಆದರೆ ಕಾಮ್ (ಉದ್ಯೋಗ) ಕೀ ಬಾತ್ ಅಲ್ಲ. ಇದರಿಂದ ಯಾವ ಪ್ರಯೋಜನವೂ ಇಲ್ಲ. ಬಿಜೆಪಿ ಉದ್ಯೋಗ ಸೃಷ್ಟಿಯಲ್ಲಿ ಸಂಪೂರ್ಣ ಸೋತಿದೆ ಎಂದು ಈ ಇಬ್ಬರು ನಾಯಕರು ಟೀಕಾ ಪ್ರಹಾರ ನಡೆಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ