ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು 1000 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಕಸ್ಟಮ್ಸ್ ಹಾಗೂ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಜಂಟಿ ದಾಳಿ ನಡೆಸಿ 191 ಕಿಲೋ ಮಾದಕ ವಸ್ತು ಜಪ್ತಿ ಮಾಡಿಕೊಂಡಿದ್ದಾರೆ.
ನವಿ ಮುಂಬೈನ ಶೆವಾ ಬಂದರಿನಲ್ಲಿ ಘಟನೆ ನಡೆದಿದ್ದು, ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.