ಶ್ರೀನಗರ:ಅಮರನಾಥ ಯಾತ್ರಿಕರು ತೆರಳುತ್ತಿದ್ದ ಖಾಸಗಿ ಬಸ್ಸೊಂದು ಕಣಿವೆಗೆ ಉರುಳಿ ಬಿದ್ದ ಪರಿಣಾಮ 11 ಮಂದಿ ಯಾತ್ರಾರ್ಥಿಗಳು ದಾರುಣವಾಗಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ.
ಜಮ್ಮು ಮತ್ತು ಶ್ರೀನಗರದ ರಾಷ್ಟ್ರೀಯ ಹೆದ್ದಾರಿಯ ಬನಿಹಾಲ್ ಬಳಿ ಈ ಅವಘಡ ಸಂಭವಿಸಿದೆ. ಬಸ್ ನ ಟಯರ್ ಸ್ಫೋಟಗೊಂಡು ಬಸ್ ಕಂದಕಕ್ಕೆ ಉರುಳಿದೆ ಎಂದು ತಿಳಿದುಬಂದಿದ್ದು, 11 ಮಂದಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಸಲಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಹಲವರ ಸ್ಥಿತಿ ಗಂಭೀರವಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.