ತಮಿಳುನಾಡಿನ ಕೃಷ್ಣಗಿರಿ ಬಳಿ ಇಂದು ಸಂಭವಿಸಿದ ಭೀಕರ ಅಪಘಾತದಲ್ಲಿ 14 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, 30 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇಂದು ಮಧ್ಯಾಹ್ನ ಸುಮಾರು 1.30 ಗಂಟೆಯವರೆಗೆ ವೇಗವಾಗಿ ಬಂದ ಖಾಸಗಿ ಸಂಸ್ಥೆಗೆ ಸೇರಿದ ಬಸ್ ಮತ್ತು ಕರ್ನಾಟಕ ಮೂಲದ ಲಾರಿಯ ಮಧ್ಯೆ ಭೀಕರ ಅಪಘಾತ ಸಂಭವಿಸಿದಾಗ, ಮತ್ತೊಂದೆಡೆಯಿಂದ ಬಂದ ಕಾರು ಕೂಡಾ ಅಪಘಾತಕ್ಕೀಡಾಗಿದೆ ಎಂದು ಮೂಲಗಳು ತಿಳಿಸಿವೆ.
ಭೀಕರ ಅಪಘಾತದಲ್ಲಿ ಏಳು ಮಂದಿ ಪುರುಷರು, ನಾಲ್ವರು ಮಹಿಳೆಯರು ಮತ್ತು ಒಂದು ಮಗು ಮೃತಪಟ್ಟಿದೆ ಎನ್ನಲಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಘಟನೆಯ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಆರ್ಟಿಓ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.