ಹದಿಹರೆಯದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಹೇಯ ಘಟನೆ ಉತ್ತರ ಪ್ರದೇಶದಲ್ಲಿ ಅಲಿರಾಜ್ಪುರದಲ್ಲಿ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ್ವಾಲಿ ಪೊಲೀಸ್ ಠಾಣೆಯಲ್ಲಿ ನಾಲ್ವರು ಆರೋಪಿಗಳ ವಿರುದ್ಧ ದೂರು ದಾಖಲಾಗಿದೆ.
ಘಟನೆ ವಿವರ: ಪೀಡಿತೆ ದೂರಿನಲ್ಲಿ ಹೇಳಿರುವ ಪ್ರಕಾರ ತಾನು ಕಂಪ್ಯೂಟರ್ ತರಗತಿ ಮುಗಿಸಿ ಮನೆಗೆ ಮರಳುತ್ತಿದ್ದಾಗ ನಾಲ್ಕು ಜನ ಯುವಕರು ನನ್ನನ್ನು ಅಪಹರಿಸಿ, ಸ್ಮಶಾನಕ್ಕೆ ಕೊಂಡೊಯ್ದು ಅತ್ಯಾಚಾರ ನಡೆಸಿದ್ದಾರೆ. ಪೊಲೀಸ್ ಠಾಣೆಯಿಂದ 200 ಮೀಟರ್ ಅಂತರದಲ್ಲಿ ಈ ದುಷ್ಕೃತ್ಯ ನಡೆದಿದೆ.
ಆರೋಪಿಗಳಲ್ಲಿ ಇಬ್ಬರನ್ನು ಮಲೇಶ್ (23) ಗಿಲ್ದಾರ್ (22) ಎಂದು ಗುರುತಿಸಲಾಗಿದೆ. ಮತ್ತಿಬ್ಬರು ಯಾರೆಂಬುದು ತನಿಖೆಯ ಬಳಿಕವಷ್ಟೇ ತಿಳಿದು ಬರಲಿದೆ.
ಒಬ್ಬರಾದ ಮೇಲೊಬ್ಬರಂತೆ ಅತ್ಯಾಚಾರ ನಡೆಸಿದರು. ಬಳಿಕ ಅಲ್ಲಿಯೇ ಬಿಟ್ಟು ಹೋದರು. ತಾನು ಸಾವರಿಸಿಕೊಂಡು ಎದ್ದು ಮನೆಗೆ ಹೋದೆ ಎಂದು ಪೀಡಿತೆ ತಿಳಿಸಿದ್ದಾಳೆ.