ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಬಿಜ್ಬೆಹಾರಾದಲ್ಲಿ ನಗರಪಾಲಿಕೆಯೇ ತ್ರಿವರ್ಣ ಧ್ವಜ ಕೊಂಡುಕೊಳ್ಳುವಂತೆ ಒತ್ತಾಯಿಸುತ್ತಿದೆ.
ಪ್ರತಿ ಅಂಗಡಿಯವರೂ ಅಭಿಯಾನಕ್ಕಾಗಿ ಒಂದು ಧ್ವಜವನ್ನಾದರೂ ಕೊಂಡುಕೊಳ್ಳಿ. ಅದಕ್ಕಾಗಿ 20 ರೂ. ಡೆಪಾಸಿಟ್ ಮಾಡಿ ಎಂದು ಸಾರ್ವಜನಿಕವಾಗಿ ವಾಹನವೊಂದರ ಮೇಲೆ ಲೌಡ್ಸ್ಪೀಕರ್ ಮೂಲಕ ಸಾರಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿದ್ಯಾರ್ಥಿಗಳು, ಅಂಗಡಿಯವರಿಗೆ ಹಾಗೂ ಸಿಬ್ಬಂದಿಗೆ ರಾಷ್ಟ್ರಧ್ವಜ ಹಾರಿಸುವಂತೆ ಜಮ್ಮು ಕಾಶ್ಮೀರ ಆಡಳಿತ ಒತ್ತಾಯಿಸುತ್ತಿರುವ ರೀತಿ ಹೇಗಿದೆ ಎಂದರೆ, ಕಾಶ್ಮೀರ ವಶಪಡಿಸಿಕೊಳ್ಳಬೇಕಾದ ಶತ್ರು ಪ್ರದೇಶ ಎನ್ನುವಂತಿದೆ ಎಂದು ಮುಫ್ತಿ ಟ್ವೀಟ್ನಲ್ಲಿ ಕಿಡಿಕಾರಿದ್ದಾರೆ.
ಸಿಪಿಐಎಂ ನಾಯಕ ಎಂ.ವೈ.ತಾರಿಗಾಮಿ ಸಹ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವ್ಯಾಪಾರಿಗಳು ಧ್ವಜ ಕೊಂಡುಕೊಳ್ಳಲು 20 ರೂ. ಹಣ ಡೆಪಾಸಿಟ್ ಮಾಡಿ ಎಂದು ಆಡಳಿತ ಘೋಷಣೆ ಮಾಡುತ್ತಿದೆ.
ಕೇಂದ್ರ ಸರ್ಕಾರದ ಹರ್ ಘರ್ ತಿರಂಗಾ ಅಭಿಯಾನದಡಿ ಧ್ವಜ ಹಾರಾಡಿಸುವಂತೆ ಒತ್ತಾಯಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.