ಫೇಸ್ಬುಕ್, ಟ್ವಿಟ್ಟರ್, ವಾಟ್ಸಾಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳನ್ನ ಜಮ್ಮು ಮತ್ತು ಕಾಶ್ಮೀರ ಸರ್ಕಾರ ನಿಷೇಧಿಸಿದೆ. ದೇಶ ವಿರೋಧಿ ಚಟುವಟಿಕೆಗೆ ಬಳಕೆ ಆರೋಪದ ಹಿನ್ನೆಲೆಯಲ್ಲಿ ದೇಶ ವಿರೋಧಿ ಸಂದೇಶಗಳ ರವಾನೆ ತಡೆಯುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ನಿಷೇಧಿಸಿ ಸರ್ಕಾರ ಆದೇಶಿಸಿದೆ.
`ಗಲಭೆಗೆ ಕಾರಣವಾದ ಎಲ್ಲ ಅಂಶಗಳನ್ನ ಪರಿಶೀಲನೆ ನಡೆಸಲಾಗಿದ್ದು, ಸೋಶಿಯಲ್ ಮೀಡಿಯಾಗಳನ್ನ ಬಳಸಿಕೊಂಡು ದೇಶ ವಿರೋಧಿ ಮತ್ತು ಸಮಾಜ ವಿರೋಧಿ ಸಂದೇಶಗಳನ್ನ ರವಾನಿಸುತ್ತಿರುವುದು ಗಮನಕ್ಕೆ ಬಂದಿದೆ. ಸದ್ಯಕ್ಕೆ ಫೇಸ್ಬುಕ್, ಟ್ವಿಟ್ಟರ್, ವಾಟ್ಸಾಪ್, ವೆಬ್ ಚಾಟ್, ಸ್ಕೈಪ್ ಸೇರಿದಂತೆ ಎಲ್ಲ ಸಾಮಾಜಿಕ ಮಾಧ್ಯಮಗಳಿಗೆ ತಾತ್ಕಾಲಿಕ ನಿಷೇಧ ಹೇರುವುದು ಅತ್ಯಂತ ಪ್ರಮುಖವಾದುದ್ದಾಗಿದೆ’ ಎಂದು’ ಗೃಹ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದರ ಜೊತೆಗೆ ಮೊಬೈಲ್ ನೆಟ್ವರ್ಕ್`ಗಳನ್ನು ಸಹ ಏಪ್ರಿಲ್ 14ರಿಂದಲೇ ಸ್ಥಗಿತಗೊಳಿಸಲಾಗಿದೆ. ದೇಶ ವಿರೋಧಿ ಕೃತ್ಯಕ್ಕೆ ಬಳಕೆಯಾಗುತ್ತಿದ್ದ 300 ವಾಟ್ಸಾಪ್ ಗ್ರೂಪ್`ಗಳನ್ನು ಸಹ ನಿಷೇಧಿಸಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ