Publish Date: Mon, 16 May 2022 (14:35 IST)
Updated Date: Mon, 16 May 2022 (14:36 IST)
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2202 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 27 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 4,31,23,801ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 5,24,241ಕ್ಕೆ ಜಿಗಿತ ಕಂಡಿದೆ.
ದೇಶದಲ್ಲಿ 2550 ಮಂದಿ ಸೋಂಕಿನಿಂದ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 4,25,82,243 ಕ್ಕೆ ಏರಿಕೆಯಾಗಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 18 ಸಾವಿರ ಗಡಿ ದಾಟಿದೆ.
geetha
Publish Date: Mon, 16 May 2022 (14:35 IST)
Updated Date: Mon, 16 May 2022 (14:36 IST)