ನವದೆಹಲಿ : ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಯೊಬ್ಬರ ಮೇಲೆ ಸಹ ಪ್ರಯಾಣಿಕನೊಬ್ಬ ಮೂತ್ರವಿಸರ್ಜನೆ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಏರ್ ಇಂಡಿಯಾಗೆ 30 ಲಕ್ಷ ರೂ. ದಂಡವನ್ನು ವಿಧಿಸಿದೆ.
ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರವಿಸರ್ಜನೆ ಮಾಡಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಡಿಜಿಸಿಎ ಏರ್ ಇಂಡಿಯಾ ವಿಮಾನಕ್ಕೆ 30 ಲಕ್ಷ ರೂ. ದಂಡ ವಿಧಿಸಿದ್ದಲ್ಲದೇ ಅಂದು ಘಟನೆ ನಡೆದ ನ್ಯೂಯಾರ್ಕ್-ದೆಹಲಿ ವಿಮಾನದ ಪೈಲಟ್-ಇನ್-ಕಮಾಂಡ್ ಪರವಾನಗಿಯನ್ನು ಕೂಡಾ 3 ತಿಂಗಳುಗಳ ಕಾಲ ಅಮಾನತುಗೊಳಿಸಿದೆ.
ಈ ಘಟನೆ 2022ರ ನವೆಂಬರ್ 26ರಂದು ನಡೆದಿದೆ. ಅಂದು ವಿಮಾನದ ವಾಚ್ಡಾಗ್ (ವಿಚಕ್ಷಣಾ ವಿಭಾಗ) ತನ್ನ ಕರ್ತವ್ಯವನ್ನು ನಿರ್ವಹಿಸಲು ವಿಫಲವಾದ ಕಾರಣಕ್ಕೆ ಏರ್ ಇಂಡಿಯಾದ ಇನ್-ಫ್ಲೈಟ್ ಸೇವೆಗಳ ನಿರ್ದೇಶಕರ ಮೇಲೆ 3 ಲಕ್ಷ ರೂ. ದಂಡವನ್ನೂ ವಿಧಿಸಿರುವುದಾಗಿ ತಿಳಿಸಿದೆ.