ಇಂದು ಮಧ್ಯಾಹ್ನ ಈಶಾನ್ಯ ರಾಜ್ಯಗಳಾದ ತ್ರಿಪುರ, ಮೇಘಾಲಯ ಮತ್ತು ಆಸ್ಸಾಂನಲ್ಲಿ ಮಧ್ಯಮ ತೀವ್ರತೆಯ ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ 5.7 ದಾಖಲಾಗಿದೆ.
ರಾಷ್ಟ್ರೀಯ ಭೂಕಂಪನ ಮಾಪನ ಕೇಂದ್ರದ ಪ್ರಕಾರ ಇಂದು ಮಧ್ಯಾಹ್ನ, 2.39ಕ್ಕೆ ಭೂಮಿ ಕಂಪಿಸಿದ್ದು, ಭೂಕಂಪನದ ಕೇಂದ್ರ ಬಿಂದು ಧಳೈ ಜಿಲ್ಲೆಯಲ್ಲಿ ಪತ್ತೆಯಾಗಿದೆ.
ಜನರು ಮನೆ, ಕಟ್ಟಡಗಳಿಂದ ಹೊರಗೋಡಿ ಬಂದು ಬಯಲಲ್ಲಿ ನಿಂತಿದ್ದಾರೆ. ತಕ್ಷಣಕ್ಕೆ ಯಾವುದೇ ಜೀವ, ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ.