ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ 6 ಕಾರ್ಮಿಕರು ಮೃತಪಟ್ಟಿರುವ ಘಟನೆ ಗುಜರಾತ್ನ ಭರೂಚ್ ಜಿಲ್ಲೆಯಲ್ಲಿ ಸೋಮವಾರ ಸಂಭವಿಸಿದೆ.
ರಾಜಧಾನಿ ಅಹಮದಾಬಾದ್ನಿಂದ 235 ಕಿ. ದೂರದ ದಹೇಜ್ ಕೈಗಾರಿಕಾ ಪ್ರದೇಶದಲ್ಲಿನ ಕಾರ್ಖಾನೆಯಲ್ಲಿ ಮುಂಜಾನೆ 3 ಗಂಟೆ ಸುಮಾರಿನಲ್ಲಿ ಈ ಘಟನೆ ಸಂಭವಿಸಿದೆ.
ಮೃತ ಆರು ಮಂದಿಯೂ ರಿಯಾಕ್ಟರ್ ಬಳಿ ಕೆಲಸ ಮಾಡುತ್ತಿದ್ದರು. ದ್ರಾವಕ ಬಟ್ಟಿ ಇಳಿಸುವ ಪ್ರಕ್ರಿಯೆ ವೇಳೆ ಅದು ಏಕಾಏಕಿ ಸ್ಫೋಟ ಆಗಿ ಎಂದು ಭರೂಚ್ ಪೊಲೀಸ್ ವರಿಷ್ಠಾಧಿಕಾರಿ ಲೀನಾ ಪಾಟೀಲ್ ಹೇಳಿದ್ದಾರೆ.
ರಿಯಾಕ್ಟರ್ನಲ್ಲಿನ ಸ್ಫೋಟದಿಂದಾಗಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿತು. ರಿಯಾಕ್ಟರ್ ಬಳಿ ಕೆಲಸ ಮಾಡುತ್ತಿದ್ದ ಎಲ್ಲಾ ಆರು ಜನರು ಸಾವಿಗೀಡಾಗಿದ್ದಾರೆ. ನಂತರ ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಬೆಂಕಿಯನ್ನು ಸಹ ನಿಯಂತ್ರಣಕ್ಕೆ ತರಲಾಗಿದೆ ಎಂದು ಅವರು ಹೇಳಿದರು.