Publish Date: Wed, 17 Aug 2022 (11:00 IST)
Updated Date: Wed, 17 Aug 2022 (09:08 IST)
ಹರ್ಯಾಣ: ಆರು ವರ್ಷದ ಬಾಲಕಿಯನ್ನು ದುರುಳನೊಬ್ಬ ಅಪಹರಿಸಿ ಅತ್ಯಾಚಾರವೆಸಗಿದ್ದಲ್ಲದೆ ಕೊಲೆ ಮಾಡಿದ ಘಟನೆ ನಡೆದಿದೆ.
ಈ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ. ಬಾಲಕಿಯ ಅಪಹರಣವಾಗುವಾಗ ಆಕೆಯ ಸಹೋದರ ಪ್ರತ್ಯಕ್ಷದರ್ಶಿಯಾಗಿದ್ದ. ತಕ್ಷಣವೇ ಆತ ಕುಟುಂಬ ಸದಸ್ಯರಿಗೆ ವಿಷಯ ತಿಳಿಸಿದ್ದಾನೆ.
ಹೀಗಾಗಿ ಕುಟುಂಬಸ್ಥರು ಕೂಡಲೇ ಪೊಲೀಸರಿಗೆ ದೂರು ನೀಡಿದ್ದಾರೆ. ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಆರೋಪಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ದೃಢಪಟ್ಟಿದೆ.