Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಆಯುಷ್ಮಾನ್ ಅನ್ವಯ 7.08 ಲಕ್ಷ ಸೋಂಕಿತರಿಗೆ ಉಚಿತವಾಗಿ ಚಿಕಿತ್ಸೆ

ಆಯುಷ್ಮಾನ್ ಅನ್ವಯ 7.08 ಲಕ್ಷ ಸೋಂಕಿತರಿಗೆ ಉಚಿತವಾಗಿ ಚಿಕಿತ್ಸೆ
ಹೊಸದಿಲ್ಲಿ , ಬುಧವಾರ, 11 ಆಗಸ್ಟ್ 2021 (07:23 IST)
ಹೊಸದಿಲ್ಲಿ: ಆಯುಷ್ಮಾನ್ ಭಾರತ್-ಪ್ರಧಾನಮಂತ್ರಿ ಜನಾರೋಗ್ಯ ಯೋಜನೆ (ಎಬಿ-ಪಿಎಂಜೆಎವೈ) ಅನ್ವಯ ಇದುವರೆಗೆ ದೇಶಾದ್ಯಂತ 7.08 ಲಕ್ಷ ಕೊರೊನಾ ಸೋಂಕಿತರಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಸಂಸತ್ತಿಗೆ ಮಾಹಿತಿ ನೀಡಿದೆ.

ಪ್ರಶ್ನೆಯೊಂದಕ್ಕೆ ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ ಆರೋಗ್ಯ ಖಾತೆ ಸಹಾಯಕ ಸಚಿವೆ ಭಾರತಿ ಪವಾರ್, "ಕೊರೊನಾ ತಪಾಸಣೆ ಹಾಗೂ ಸೋಂಕಿತರಿಗೆ ಚಿಕಿತ್ಸೆ ನೀಡಲು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ (ಎನ್ಎಚ್ಎ)ವು ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಅಗತ್ಯ ನೆರವು ನೀಡಿದೆ. ಜುಲೈ 25ರ ವೇಳೆಗೆ ಆಯುಷ್ಮಾನ್ ಭಾರತ್ ಅಡಿಯಲ್ಲಿ 20.32 ಲಕ್ಷ ಜನರಿಗೆ ಕೊರೊನಾ ತಪಾಸಣೆ ಹಾಗೂ 7.08 ಲಕ್ಷ ಸೋಂಕಿತರಿಗೆ ಚಿಕಿತ್ಸೆ ನೀಡಲಾಗಿದೆ,'' ಎಂದು ತಿಳಿಸಿದ್ದಾರೆ.
ದೇಶದ 10.74 ಬಡ ಕುಟುಂಬಗಳು ವಾರ್ಷಿಕವಾಗಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ಪಡೆಯುವ ದಿಸೆಯಲ್ಲಿ ಕೇಂದ್ರ ಸರಕಾರವು 2018ರಲ್ಲಿ ಆಯುಷ್ಮಾನ್ ಭಾರತ್ - ಪ್ರಧಾನಮಂತ್ರಿ ಜನಾರೋಗ್ಯ ಯೋಜನೆ (ಎಬಿ-ಪಿಎಂಜೆಎವೈ) ಯೋಜನೆ ಜಾರಿಗೊಳಿಸಿದೆ. ಕೊರೊನಾ ಸಂದರ್ಭದಲ್ಲಿ ಇದು ಜನರ ನೆರವಿಗೆ ಬರುತ್ತಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ರೆಡ್ ವೈನ್ ಸೇವನೆ ಆರೋಗ್ಯಕ್ಕೆ ಎಷ್ಟು ಉಪಯುಕ್ತ ಗೊತ್ತಾ?