Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ನವದೆಹಲಿ: ತನ್ನ ಲೈಂಗಿಕ ತೃಷೆ ತೀರಿಸಿಕೊಳ್ಳಲು 7 ವರ್ಷದ ಮಗುವನ್ನು ಅಪಹರಿಸಿ ಕಾರಿನಲ್ಲಿ ಕರೆದೊಯ್ಯುತ್ತಿದ್ದ ಪಾಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ದೆಹಲಿಯಲ್ಲಿ ಈ ಘಟನೆ ನಡೆದಿದೆ. ಮನೆ ಬಳಿ ಆಟವಾಡುತ್ತಿದ್ದ ಮಗುವನ್ನು ಆರೋಪಿ ಅಪಹರಿಸಿ ತನ್ನ ಕಾರಿನಲ್ಲಿ ಕರೆದೊಯ್ಯುತ್ತಿದ್ದ. ಆದರೆ ಆತನ ಕಾರಿನ ಹಿಂಬದಿ ಸೀಟ್ ನಲ್ಲಿ ಅಳುತ್ತಾ ಕೂತಿದ್ದ ಮಗು ಗಸ್ತು ಪಡೆ ಪೊಲೀಸರ ಕಣ್ಣಿಗೆ ಬಿದ್ದಿದೆ.
ಹೀಗಾಗಿ ಮಗುವನ್ನು ಪ್ರಶ್ನೆ ಮಾಡಿದಾಗ ನಿಜಾಂಶ ಗೊತ್ತಾಗಿದೆ. ತಕ್ಷಣವೇ ಆರೋಪಿಯನ್ನು ಬಂಧಿಸಲಾಗಿದ್ದು, ಮಗುವನ್ನು ಪೋಷಕರ ಕೈಗೊಪ್ಪಿಸಲಾಗಿದೆ.