Publish Date: Mon, 27 Dec 2021 (11:05 IST)
Updated Date: Mon, 27 Dec 2021 (09:08 IST)
ಲಕ್ನೋ: ಏಳು ವರ್ಷದ ಮುಗ್ಧ ಮಗುವಿನ ಮೇಲೆ ಕಾಮುಕರು ಅತ್ಯಾಚಾರ ನಡೆಸಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಮೃತದೇಹ ಕಬ್ಬಿನಗದ್ದೆಯೊಂದರಲ್ಲಿ ಪತ್ತೆಯಾಗಿದ್ದು, ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ. ಬಾಲಕಿ ನಾಪತ್ತೆಯಾಗಿರುವ ಬಗ್ಗೆ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು.
ಬಳಿಕ ಕಬ್ಬಿನ ಗದ್ದೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಹೀಗಾಗಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಈಗಾಗಲೇ ಶಂಕಿತ ಕೆಲವರನ್ನು ಬಂಧಿಸಿದ್ದಾರೆ.
Krishnaveni K
Publish Date: Mon, 27 Dec 2021 (11:05 IST)
Updated Date: Mon, 27 Dec 2021 (09:08 IST)