11 ವರ್ಷ ವಯಸ್ಸಿನ ಬಾಲಕಿಗೆ ಬ್ಲ್ಯೂ ಫಿಲ್ಮ್ ತೋರಿಸಿ ಕೆಲ ತಿಂಗಳುಗಳಿಂದ ನಿರಂತರವಾಗಿ ಅತ್ಯಾಚಾರವೆಸಗುತ್ತಿದ್ದ 72 ವರ್ಷ ವಯಸ್ಸಿನ ವೃದ್ಧನನ್ನು ಪೊಲೀಸರು ಬಂಧಿಸಿದ್ದಾರೆ.
ಕಾರ್‌ಪೆಂಟರ್ ವೃತ್ತಿಯಲ್ಲಿರುವ ಆರೋಪಿ ಕೃಷ್ಣ, ನಾಲ್ಕನೇ ತರಗತಿಯಲ್ಲಿ ಓದುತ್ತಿರುವ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿ ನಂತರ ಅತ್ಯಾಚಾರವೆಸಗುತ್ತಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಆರೋಪಿಯ ವಿರುದ್ಧ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಬಾಲಕಿಯ ಪೋಷಕರು ದಿನಗೂಲಿ ಕಾರ್ಮಿಕರಾಗಿದ್ದಾರೆ. ಬಾಲಕಿ ಶಾಲೆಯಿಂದ ಮನೆಗೆ ಬಂದ ನಂತರ ಆರೋಪಿ ಕೃಷ್ಣ ಆಕೆಯ ಮನವೊಲಿಸಿ ತನ್ನ ಮನೆಗೆ ತರೆದುಕೊಂಡು ಹೋಗಿ ಅತ್ಯಾಚಾರವೆಸಗುತ್ತಿದ್ದ ಎನ್ನಲಾಗಿದೆ.
ಬಾಲಕಿ ತನ್ನ ಪೋಷಕರಿಗೆ ವೃದ್ಧನ ಕಾಮಕೇಳಿಯ ಬಗ್ಗೆ ಮಾಹಿತಿ ನೀಡಿದರೂ ಪೋಷಕರು ಅದನ್ನು ನಂಬಿರಲಿಲ್ಲ. ಕೆಲ ದಿನಗಳ ಹಿಂದೆ ಬಾಲಕಿಯ ದೇಹದಲ್ಲಾಗುತ್ತಿರುವ ಬದಲಾವಣೆಗಳನ್ನ ಗಮನಿಸಿದ ಪೋಷಕರು ಆರೋಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಆರಂಭದಲ್ಲಿ ನಿರಾಕರಿಸಿದರೂ ನಂತರ ತನ್ನ ಕೀಳುಕೃತ್ಯವನ್ನು ಒಪ್ಪಿಕೊಂಡಿದ್ದಾನೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.