ನವದೆಹಲಿ : 19 ವರ್ಷದ ಯುವತಿಯೊಬ್ಬಳು ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ಮಾಡಿದ ಪ್ರಕರಣವೊಂದು ಇದೇ ಮೊದಲ ಬಾರಿಗೆ ದೇಶದಲ್ಲಿ ನಡೆದಿರುವುದಾಗಿ ತಿಳಿದುಬಂದಿದೆ.
ಕಳೆದ ವರ್ಷ ಸೆಪ್ಟಂಬರ್ ನಲ್ಲಿ ಸುಪ್ರೀಂ ಕೋರ್ಟ್ ಸಲಿಂಗಕಾಮಕ್ಕೆ ಮಾನ್ಯತೆ ನೀಡಿ ಆದೇಶ ನೀಡಿತ್ತು. ಆದರೆ ಕೋರ್ಟ್ ನ ಈ ತೀರ್ಪನ್ನು ದುರ್ಬಳಕೆ ಮಾಡಿಕೊಂಡ ಯುವತಿಯೊಬ್ಬಳು ಕೃತಕವಾಗಿ ಪುರುಷ ಜನನಾಂಗವನ್ನು ಸೊಂಟಕ್ಕೆ ಕಟ್ಟಿಕೊಂಡು ಮಹಿಳೆಯೊಬ್ಬಳ ಮೇಲೆ , ಬಲವಂತವಾಗಿ ಮತ್ತು ಅಸಹಜವಾಗಿ ಲೈಂಗಿಕ ಕ್ರಿಯೆ ನಡೆಸಿದ್ದಾಳೆ. ಈ ಬಗ್ಗೆ ಅತ್ಯಾಚಾರಕ್ಕೆ ಒಳಗಾದ ಮಹಿಳೆ ದೂರು ನೀಡಿದ್ದಾರೆ.
ಈ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಿಚಾರಣೆ ಬಳಿಕ ತನ್ನ ತಪ್ಪನ್ನು ಒಪ್ಪಿಕೊಂಡ ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷನ್ 377ರ ಅಡಿಯಲ್ಲಿ ಯುವತಿಯನ್ನು ಬಂಧಿಸಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.