ತನ್ನ ಪ್ರೀತಿ ತಿರಸ್ಕರಿಸಿದ 17 ವರ್ಷದ ಕಾಲೇಜು ಯುವತಿಯನ್ನು ದುಷ್ಕರ್ಮಿಯೋರ್ವ ಹಾಡಹಗಲೇ ತಲೆಗೆ ಗುಂಡಿಕ್ಕಿ ಹತ್ಯೆ ಮಾಡಿದ ಭೀಕರ ಘಟನೆ ಬಿಹಾರ ರಾಜಧಾನಿ ಪಾಟ್ನಾದಲ್ಲಿ ನಡೆದಿದೆ. ವಿದ್ಯಾರ್ಥಿನಿ, ಕಾಲೇಜು ಮಗಿಸಿ ಕೋಚಿಂಗ್ ಕ್ಲಾಸ್ಗೆ ಹೋಗುತ್ತಿದ್ದ ವೇಳೆ ಆಕೆಯನ್ನು ಬೆನ್ನಟ್ಟಿದ ದುಷ್ಕರ್ಮಿ ಆಕೆ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪಿಸ್ತೂಲ್ನಿಂದ ತಲೆಗೆ ಗುಂಡಿಕ್ಕಿದ್ದು, ಈ ಹತ್ಯೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.