Publish Date: Fri, 26 Aug 2022 (10:50 IST)
Updated Date: Fri, 26 Aug 2022 (10:52 IST)
ಲಕ್ನೋ : ಉತ್ತರ ಪ್ರದೇಶದ ಮೊರಾದಾಬಾದ್ನ ಬಹುಮಹಡಿ ಕಟ್ಟಡದಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡು ಐವರು ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.
ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಐವರು ಪ್ರಾಣ ಕಳೆದುಕೊಂಡಿದ್ದು, ಏಳು ಮಂದಿಯನ್ನು ರಕ್ಷಿಸಲಾಗಿದೆ.
ನಂತರ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಮೊರಾದಾಬಾದ್ನ ಜಿಲ್ಲಾ ಮ್ಯಾಜಿಸ್ಟ್ರೇಟ್ ಶೈಲೇಂದ್ರ ಕುಮಾರ್ ಸಿಂಗ್ ಹೇಳಿದ್ದಾರೆ.
ಮೂರು ಅಂತಸ್ತಿನ ಕಟ್ಟಡದಲ್ಲಿ ಒಂದೇ ಕುಟುಂಬದ ಸದಸ್ಯರು ವಾಸವಿದ್ದರು ಎಂಬುದು ಮಾಹಿತಿಯಿಂದ ತಿಳಿದುಬಂದಿದೆ.