ನವದೆಹಲಿ : ಹೊಸ ವರ್ಷದ ಸಂಭ್ರಮದಲ್ಲಿದ್ದ ಮಾಜಿ ಶಾಸಕರೊಬ್ಬರು ಖುಷಿಯಲ್ಲಿ ಗಂಡು ಹಾರಿಸಿದ ಪರಿಣಾಮ ಮಹಿಳೆಯೊಬ್ಬರನ್ನು ಗಂಭೀರವಾಗಿ ಗಾಯಗೊಂಡ ಘಟನೆ ದೆಹಲಿಯಲ್ಲಿ ನಡೆದಿದೆ.
ದೆಹಲಿಯ ಜೆಡಿಯು ಮಾಜಿ ಶಾಸಕ ರಾಜು ಸಿಂಗ್ ಅವರ ಫಾರ್ಮ್ ಹೌಸ್ ನಲ್ಲಿ ಹೊಸ ವರ್ಷಾಚರಣೆಯ ಸಂಭ್ರಮದ ತಯಾರಿ ನಡೆದಿತ್ತು. ಈ ವೇಳೆ ಖುಷಿಯಲ್ಲಿ ರಾಜು ಸಿಂಗ್ ತಮ್ಮ ಬಂದೂಕಿನಿಂದ ಗುಂಡು ಹಾರಿಸಿದ್ದಾರೆ. ಇದರಲ್ಲಿ ಒಂದು ಗುಂಡು ಅವರ ಸ್ನೇಹಿತ ವಿಕಾಸ್ ಗುಪ್ತಾ ಪತ್ನಿಯ ಹಣೆಗೆ ತಗುಲಿದೆ. ಇದರಿಂದ ಗಂಭೀರ ಗಾಯಗೊಂಡ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಘಟನೆಗೆ ಸಂಬಂಧಿಸಿದಂತೆ ರಾಜು ಸಿಂಗ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಸಿಸಿ ಟಿವಿ ಫುಟೇಜ್ ಗಳನ್ನು ಸಂಗ್ರಹಿಸಿದ್ದಾರೆ ಹಾಗೂ ರಾಜು ಸಿಂಗ್ ಬಂಧನಕ್ಕೆ ಬಲೆ ಬೀಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.