ಜಲ್ಪಾಯ್ ಗುರಿ : ಇಡೀ ದೇಶವನ್ನೇ ಬಿಚ್ಚಿ ಬೀಳಿಸಿದ ದೆಹಲಿಯಲ್ಲಿ ನಡೆದಿದ್ದ ನಿರ್ಭಯಾ ಅತ್ಯಾಚಾರ ಪ್ರಕರಣದ ರೀತಿಯೇ ಅತ್ಯಾಚಾರ ಪ್ರಕರಣವೊಂದುಪಶ್ಚಿಮ ಬಂಗಾಳದ ಜಲ್ಪಾಯ್ಗುರಿಯಲ್ಲಿ ನಡೆದಿದೆ.
ಶನಿವಾರ ಸಂಬಂಧಿಕನೊಬ್ಬ ಮಹಿಳೆಯೊಬ್ಬಳನ್ನು ಜಾಗದ ವಿವಾದವನ್ನು ಪರಿಹರಿಸುವ ನೆಪದಲ್ಲಿ ಕರೆದು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಲ್ಲದೆ ಆಕೆಯ ಗುಪ್ತಾಂಗಕ್ಕೆ ಕಬ್ಬಿಣದ ರಾಡನ್ನು ತುರುಕಿ ವಿಕೃತ ಮೆರೆದಿದ್ದಾನೆ.
ಈ ಘಟನೆಯಿಂದ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ಆರೋಪಿ ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.