ಆಂಧ್ರ ಪ್ರದೇಶ : 13 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳು ಅಣ್ಣನಿಂದ ಅತ್ಯಾಚಾರಕ್ಕೊಳಗಾಗಿ ಆತನ ಮಗುವಿಗೆ ಜನ್ಮ ನೀಡಿದ ಘಟನೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಮಚಲಿಪಟ್ಟಣ ತಾಲೂಕಿನಲ್ಲಿ ನಡೆದಿದೆ.
ಸಂತ್ರಸ್ತ ಬಾಲಕಿಯ ದೊಡ್ಡಮ್ಮನ ಮಗ ಆಕೆಯನ್ನು ಬೆದರಿಸಿ ಅತ್ಯಾಚಾರ ಎಸಗಿದ್ದಾನೆ. ಇದರ ಪರಿಣಾಮ ಆಕೆ 6 ತಿಂಗಳ ಗರ್ಭಿಣಿಯಾಗಿದ್ದು, ಗರ್ಭಪಾತಕ್ಕೆ ಅವಕಾಶ ಇಲ್ಲದ ಕಾರಣ ಇದೀಗ ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.
ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.