Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಲಕ್ನೋ : ಸರ್ಕಾರಿ ಶಾಲೆಯೊಂದರ ಪ್ರಾಂಶುಪಾಲನೇ 17 ವರ್ಷದ ವಿದ್ಯಾರ್ಥಿನಿಗೆ ಮಾದಕ ವಸ್ತು ನೀಡಿ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಮೀರತ್ನಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ವರದಿಗಳ ಪ್ರಕಾರ ನವೆಂಬರ್ 23ರಂದು ಪ್ರಾಂಶುಪಾಲ ಶಾಲೆಯ ಒಟ್ಟು 9 ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದ. ಅಂದು ರಾತ್ರಿ ವೇಳೆ ತಂಗಲು 2 ಹೋಟೆಲ್ ಕೊಠಡಿಗಳನ್ನು ತೆಗೆದುಕೊಂಡಿದ್ದು, ಒಂದು ಕೊಠಡಿಯಲ್ಲಿ 8 ವಿದ್ಯಾರ್ಥಿಗಳನ್ನಿರಿಸಿದ್ದ.
ಇನ್ನೊಂದು ಕೊಠಡಿಯಲ್ಲಿ ಪ್ರಾಂಶುಪಾಲ 11ನೇ ತರಗತಿಯ ವಿದ್ಯಾರ್ಥಿನಿಯೊಂದಿಗೆ ಉಳಿದುಕೊಂಡಿದ್ದ ಎನ್ನಲಾಗಿದೆ.
ಪ್ರಾಂಶುಪಾಲ ವಿದ್ಯಾರ್ಥಿನಿಗೆ ಆಹಾರದಲ್ಲಿ ಮಾದಕ ವಸ್ತುವನ್ನು ಬೆರೆಸಿದ್ದು, ಬಳಿಕ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ವಿದ್ಯಾರ್ಥಿನಿ ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿದಾಗ, ಪ್ರಾಂಶುಪಾಲ ಪರೀಕ್ಷೆಯಲ್ಲಿ ಫೇಲ್ ಮಾಡುವುದಾಗಿ ಹಾಗೂ ಕೊಲೆಯ ಬೆದರಿಕೆ ಹಾಕಿದ್ದಾನೆ ಎಂದು ಹಸ್ತಿನಾಪುರ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.