Publish Date: Sat, 29 Sep 2018 (07:20 IST)
Updated Date: Sat, 29 Sep 2018 (07:22 IST)
ಲಕ್ನೋ : ಮಹಿಳಾ ಪೇದೆಯೊಬ್ಬರ ಮೇಲೆ ಸಬ್ ಇನ್ಸ್‌ಪೆಕ್ಟರ್ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ.
ಪಿಯೂಷ್ ಸಿಂಗ್ ಎಂಬಾತ ಅತ್ಯಾಚಾರ ಎಸಗಿದ ಆರೋಪಿ ಎಂಬುದಾಗಿ ತಿಳಿದುಬಂದಿದ್ದು, ಇತ ಅನೇಕ ತಿಂಗಳಿನಿಂದ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಹಲ್ಲೆ ಮಾಡುತ್ತಿದ್ದ ಎಂದು ಸಂತ್ರಸ್ತೆ ತಿಳಿಸಿದ್ದಾಳೆ.
ಐಪಿಸಿ ಸೆಕ್ಷನ್ 376 ಹಾಗೂ ಎಸಿ, ಎಸ್ಟಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಪಿಯೂಷ್ ಸಿಂಗ್‍ನನ್ನು ಕೆಲಸದಿಂದ ಅಮಾನತು ಮಾಡಿ ಆತನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.