Select Your Language

Notifications

webdunia
webdunia
webdunia
webdunia

ಜ್ಞಾನವ್ಯಾಪಿ ಮಸೀದಿ ವಿವಾದಕ್ಕೆ ಮಹತ್ವದ ತಿರುವು?

ಜ್ಞಾನವ್ಯಾಪಿ ಮಸೀದಿ ವಿವಾದಕ್ಕೆ ಮಹತ್ವದ ತಿರುವು?
ಲಕ್ನೋ , ಮಂಗಳವಾರ, 13 ಸೆಪ್ಟಂಬರ್ 2022 (13:06 IST)
ಲಕ್ನೋ : ಜ್ಞಾನವ್ಯಾಪಿ ಮಸೀದಿ ವಿವಾದಕ್ಕೆ ಮಹತ್ವದ ತಿರುವು ಸಿಕ್ಕಿದೆ. ಹಿಂದೂಗಳಿಗೆ ಮೊದಲ ಹಂತದ ಜಯ ಲಭಿಸಿದೆ.

ಮಸೀದಿಯ ಆವರಣದಲ್ಲಿ ಪತ್ತೆಯಾಗಿದ್ದ ಶಿವಲಿಂಗ ಮತ್ತು ಶೃಂಗಾರಗೌರಿ ಪೂಜೆಗೆ ಅನುಮತಿ ಕೋರಿ ಐದು ಮಂದಿ ಮಹಿಳೆಯರು ಸಲ್ಲಿಸಿದ್ದ ಅರ್ಜಿಗಳು ವಿಚಾರಣೆಗೆ ಯೋಗ್ಯವಾಗಿವೆ ಎಂದು ವಾರಣಾಸಿ ಜಿಲ್ಲಾ ಕೋರ್ಟ್ ಮಹತ್ವದ ಆದೇಶ ಪ್ರಕಟಿಸಿದೆ.

1991ರ ಪೂಜಾ ಸ್ಥಳಗಳ ಕಾಯ್ದೆಯ ಪ್ರಕಾರ ಈ ಜಾಗದಲ್ಲಿ ಪೂಜೆ ಮಾಡಲು ಸಾಧ್ಯವಿಲ್ಲ ಎಂದು ಮಸೀದಿ ಪರ ಅರ್ಜಿದಾರರು ವಾದ ಮಾಡಿದ್ದರು.

ಆದರೆ ನ್ಯಾ. ಎಕೆ ವೈಷ್ಣವ್ ಈ ವಾದವನ್ನು ಪರಿಗಣಿಸದೇ ಶೃಂಗಾರ ಗೌರಿ ಹಾಗೂ ಶಿವಲಿಂಗದ ದರ್ಶನ ಮತ್ತು ಪ್ರತಿನಿತ್ಯ ಪೂಜೆ ಸಲ್ಲಿಸಲು ಅವಕಾಶ ನೀಡುವುಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಒಪ್ಪಿಗೆ ನೀಡಿ ಮಸೀದಿ ಪರ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿದ್ದಾರೆ.

ಐವರು ಮಹಿಳೆಯರು ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಯೋಗ್ಯ ಎಂಬ ಆದೇಶ ಪ್ರಕಟವಾದ ಹಿನ್ನೆಲೆಯಲ್ಲಿ ಕೋರ್ಟ್ ಮಸೀದಿ ಒಳಗಡೆ ಪೂಜೆಗೆ ಅವಕಾಶ ನೀಡಬೇಕಾ? ಬೇಡವೋ ಎಂಬ ಅರ್ಜಿಯ ವಿಚಾರಣೆಯನ್ನು ನಡೆಸಲಿದೆ. ಮುಂದಿನ ಅರ್ಜಿಯ ವಿಚಾರಣೆ ಸೆ.22 ರಂದು ನಡೆಯಲಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಮದ್ಯಪಾನ ತಡೆ ನೀತಿ ಜಾರಿಗೆ ತರಲು ಸುಪ್ರೀಂಕೋರ್ಟ್ ಗೆ ಮನವಿ!