ಬಿಹಾರ : ಯುವತಿಯ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಗುಂಡಿಟ್ಟು ಕೊಂದು ಬಳಿಕ ಆಕೆಯ ಮೃತದೇಹವನ್ನು ಸುಟ್ಟ ಭೀಕರ ಘಟನೆ ಬಿಹಾರದ ಬಕ್ಸಾರ್ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ನಡೆದಿದೆ.
ಮಂಗಳವಾರದಂದು ಅರ್ಧ ಸುಟ್ಟ ಯುವತಿಯ ಮೃತದೇಹ ಪತ್ತೆಯಾಗಿದ್ದು, ಅದನ್ನು ವಶಕ್ಕೆ ಪಡೆದ ಇತಾಡಿ ಪೊಲೀಸರು, ಅತ್ಯಾಚಾರ ಎಸಗಿದ ಬಳಿಕ ಆಕೆಯ ತಲೆಗೆ ಗುಂಡಿಟ್ಟು ಕೊಲೆ ಮಾಡಲಾಗಿದೆ. ಸಾಕ್ಷಿ ಸಿಗಬಾರದೆಂದು ಯುವತಿಯ ಸೊಂಟದ ಮೇಲ್ಭಾಗ ಸಂಪೂರ್ಣ ಸುಟ್ಟು ಹಾಕಲಾಗಿದೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಂದ ಬಳಿಕ ತನಿಖೆ ನಡೆಸುವುದಾಗಿ ಪೊಲೀಸರು ತಿಳಿಸಿದ್ದಾರೆ.