Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಆಪ್ಗೆ ರಾಷ್ಟ್ರೀಯ ಪಕ್ಷದ ಮಾನ್ಯತೆ ನೀಡಿದ ಚುನಾವಣಾ ಆಯೋಗ

ಆಪ್ಗೆ ರಾಷ್ಟ್ರೀಯ ಪಕ್ಷದ ಮಾನ್ಯತೆ ನೀಡಿದ ಚುನಾವಣಾ ಆಯೋಗ
ನವದೆಹಲಿ , ಮಂಗಳವಾರ, 11 ಏಪ್ರಿಲ್ 2023 (06:02 IST)
ನವದೆಹಲಿ : ಕೇಂದ್ರ ಚುನಾವಣಾ ಆಯೋಗವು ಆಮ್ ಆದ್ಮಿ ಪಕ್ಷಕ್ಕೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ ನೀಡಿದೆ. ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್, ಶರದ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ ಹಾಗೂ ಸಿಪಿಐ ಪಕ್ಷಗಳು ರಾಷ್ಟ್ರೀಯ ಪಕ್ಷದ ಸ್ಥಾನಮಾನವನ್ನು ಕಳೆದುಕೊಂಡಿವೆ. 

ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆಯಲು, ಕನಿಷ್ಠ 4 ರಾಜ್ಯಗಳಲ್ಲಿ ರಾಜ್ಯ ಪಕ್ಷವಾಗಿ ಗುರುತಿಸಿಕೊಂಡಿರಬೇಕು. ಆ ರಾಜ್ಯಗಳ ವಿಧಾನಸಭೆಯಲ್ಲಿ ಕನಿಷ್ಠ ಇಬ್ಬರು ಸದಸ್ಯರನ್ನ ಹೊಂದಿರಬೇಕು. ಅಥವಾ ಲೋಕಸಭೆಯಲ್ಲಿ ಕನಿಷ್ಠ ಶೇ.2 ರಷ್ಟು ಸದಸ್ಯ ಬಲವನ್ನ ಹೊಂದಿರಬೇಕು. 

ಎಎಪಿ ದೆಹಲಿ, ಪಂಜಾಬ್ ರಾಜ್ಯಗಳಲ್ಲಿ ಅಧಿಕಾರದಲ್ಲಿದೆ. ಗೋವಾ ಮತ್ತು ಗುಜರಾತ್ ರಾಜ್ಯಗಳಲ್ಲಿ ಇಬ್ಬರಿಗಿಂತ ಹೆಚ್ಚಿನ ಶಾಸಕರನ್ನ ಹೊಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ವಿರುದ್ಧ HDK ವಾಗ್ದಾಳಿ