ನವದೆಹಲಿ : ಮೇಕೆದಾಟು ಯೋಜನೆಯ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಮೊದಲ ಜಯ ಸಿಕ್ಕಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಯೋಜನಾ ವರದಿಗೆ ತಡೆ ನೀಡುವಂತೆ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಆದರೆ ಇದೀಗ ಮೇಕೆದಾಟು ಯೋಜನೆ ವಿರೋಧಿಸಿದ್ದ ತಮಿಳುನಾಡಿಗೆ ಹಿನ್ನಡೆಯಾಗಿದೆ.
ಯೋಜನಾ ವರದಿಗೆ ತಡೆ ಕೋರಿದ್ದ ತಮಿಳುನಾಡು ಸರ್ಕಾರದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಮೇಕೆದಾಟು ಯೋಜನಾ ವರದಿ ಸಿದ್ಧಪಡಿಸಲು ಯಾವುದೇ ತಡೆಯಾಜ್ಞೆ ಇಲ್ಲ. ಕೇವಲ ಯೋಜನಾ ವರದಿ ಸಿದ್ಧಪಡಿಸಲಾಗುತ್ತಿದೆ. ಜಲ ಆಯೋಗ ಸಹ ಯೋಜನೆಯ ಸಂಪೂರ್ಣ ವಿವರ ಕೇಳಿದೆ ಅಷ್ಟೇ ಎಂದು ತಿಳಿಸಿದೆ. ಹಾಗೇ 4 ವಾರಗಳಲ್ಲಿ ವರದಿ ಸಲ್ಲಿಸುವಂತೆ ಕೇಂದ್ರಕ್ಕೆ ಸುಪ್ರೀಂಕೋರ್ಟ್ ಸೂಚಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.