ಸಿನಿಮೀಯ ರೀತಿಯಲ್ಲಿ ಪೊಲೀಸರ ವಶದಲ್ಲಿದ್ದ ಆರೋಪಿಯೊಬ್ಬ ಎಸ್ಕೇಪ್ ಆಗಿದ್ದಾನೆ.
ಅಪ್ರಾಪ್ತೆಯೊಬ್ಬಳ ಮೇಲೆ ಮಾಡಬಾರದ್ದನ್ನು ಮಾಡಿದ ಕಾರಣಕ್ಕೆ ಬಂಧನಕ್ಕೆ ಒಳಗಾಗಿದ್ದ ಆರೋಪಿಯೊಬ್ಬ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ.
ಪೊಲೀಸರು ಅರೆಸ್ಟ್ ಮಾಡಿ ಆರೋಪಿಯನ್ನು ಕರೆದೊಯ್ಯುತ್ತಿದ್ದರು. ಮಾರ್ಗದ ನಡುವೆ ಪೆಟ್ರೋಲ್ ಹಾಕಿಸುತ್ತಿದ್ದಾಗ ಆರೋಪಿ ತಪ್ಪಿಸಿಕೊಂಡು ಓಡಿಹೋಗಿದ್ದಾನೆ.
ಉತ್ತರ ಪ್ರದೇಶದ ಲಖಿಂಪುರಖೇರಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ.