ಮಹಿಳಾ ಪೊಲೀಸ್ ಪೇದೆಯ ಮೇಲೆ ಕೆಲ ಅಪರಿಚಿತ ವ್ಯಕ್ತಿಗಳು ಆಸಿಡ್ ಎರಚಿ ಪರಾರಿಯಾದ ಘಟನೆ ಜಿಲ್ಲೆಯ ತಿರುಪತ್ತೂರ್ನಲ್ಲಿ ನಡೆದಿದೆ.
ಮಹಿಳಾ ಪೊಲೀಸ್ ಪೇದೆ ಲಾವಣ್ಯರ ಮುಖ ಮತ್ತು ಕೈಗಳಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಏತನ್ಮಧ್ಯೆ, ತಮಿಳುನಾಡು ಪೊಲೀಸರು ಆರೋಪಿಗಳ ಪತ್ತೆಗಾಗಿ ಐದು ವಿಶೇಷ ತಂಡಗಳನ್ನು ರಚಿಸಿದ್ದು ಶೀಘ್ರದಲ್ಲಿಯೇ ಬಂಧಿಸುವ ವಿಶ್ವಾಸವಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯ ಹಿಂದೆ ವೈಯಕ್ತಿ ದ್ವೇಷವಿದೆಯೋ ಅಥವಾ ಬೇರೆ ಯಾವ ಕಾರಣವಿದೆ ಎನ್ನುವ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.