Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಲಕ್ನೋ : ಮಹಿಳಾ ಬ್ಯಾಂಕ್ ಮ್ಯಾನೇಜರ್ ಮೇಲೆ ಇಬ್ಬರು ವ್ಯಕ್ತಿಗಳು ಆ್ಯಸಿಡ್ ದಾಳಿ ನಡೆಸಿದ ಘಟನೆ ಉತ್ತರಪ್ರದೇಶದ ಚಾರ್ವಾ ಪ್ರದೇಶದಲ್ಲಿ ನಡೆದಿದೆ.
34 ವರ್ಷದ ಮಹಿಳೆ ಪ್ರಯಾಗ್ ರಾಜ್ ನಿವಾಸಿಯಾಗಿದ್ದಾರೆ. ಇವರು ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಹಿರಿಯ ವ್ಯವಸ್ಥಾಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಮಹಿಳೆಯು ಕರ್ತವ್ಯಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಚಿಲ್ಲಾ ಶಹಬಾಜಿ ಗ್ರಾಮದ ಬಳಿ ಇಬ್ಬರು ಯುವಕರು ಆಕೆಯ ಸ್ಕೂಟರ್ ತಡೆದು, ಆಕೆಯ ಮುಖದ ಮೇಲೆ ಆ್ಯಸಿಡ್ ಎರಚಿ, ಅಲ್ಲಿಂದ ಪರಾರಿಯಾಗಿದ್ದಾರೆ.
ಘಟನೆ ಸಂಬಂಧ ಮಹಿಳೆಯು ಗಂಭೀರ ಗಾಯಗೊಂಡಿದ್ದು, ಆಕೆಯನ್ನು ಪ್ರಯಾಗ್ ರಾಜ್ನಲ್ಲಿರುವ ಎಸ್ಆರ್ಎನ್ ಆಸ್ಪತ್ರೆಗೆ ದಾಖಲಿಸಲಾಗಿದೆ.