ಎರಡು ವರ್ಷಗಳ ತನಿಖೆಯ ನಂತರ ಹಿಂಡೆನ್ಬರ್ಗ್ ವರದಿ ಪ್ರಕಟವಾಗಿದೆ. ದಶಕಗಳ ಅವಧಿಯ ವ್ಯವಹಾರದಲ್ಲಿ ಅದಾನಿ ಸಮೂಹ ಸ್ಟಾಕ್ ಮ್ಯಾನಿಪ್ಯುಲೇಷನ್ ಮತ್ತು ಲೆಕ್ಕಪತ್ರ ವಂಚನೆ ಎಸಗಿದೆ ಎಂದು ಆರೋಪಿಸಿದೆ.
ಅದಾನಿ ಗ್ರೂಪ್ನ ಮಾಜಿ ಹಿರಿಯ ಕಾರ್ಯನಿರ್ವಾಹಕರು ಸೇರಿದಂತೆ ಹಲವಾರು ಜನರನ್ನು ಸಂಶೋಧನೆಗಾಗಿ ಸಂದರ್ಶಿಸಲಾಗಿದೆ. ಸಾವಿರಾರು ದಾಖಲೆಗಳನ್ನು ಪರಿಶೀಲಿಸಲಾಗಿದೆ. ಹನ್ನೆರಡು ವಿವಿಧ ರಾಷ್ಟ್ರಗಳಲ್ಲಿ ಅದಾನಿ ಕಂಪನಿಗಳನ್ನು ವೀಕ್ಷಿಸಲಾಗಿದೆ ಎಂದು ಹೇಳಿದೆ.
ಅದಾನಿ ಗ್ರೂಪ್ ಭಾರೀ ಸಾಲ ಮಾಡಿದೆ. ತಮ್ಮ ಸಾಲಗಳಿಗೆ ಷೇರುಗಳನ್ನೇ ಒತ್ತೆ ಇಡುತ್ತಿದೆ. ಇದರಿಂದಾಗಿ ಸಮೂಹದ ಆರ್ಥಿಕ ಸ್ಥಿತಿ ಅಪಾಯದಲ್ಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಿದೆ.