Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಲಕ್ನೋ : ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಅಖಾಡಕ್ಕೆ ಇಳಿದಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂದು ಘೋರಖ್ಪುರ ನಗರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು.
ಇದೇ ಮೊದಲ ಬಾರಿಗೆ ಅವರು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಹಿರಿಯ ನಾಯಕರು ಭಾಗಿಯಾಗಿದ್ದರು. ನಾಮಪತ್ರ ಸಲ್ಲಿಕೆಗೂ ಮುನ್ನ ಗೋರಖನಾಥ್ ದೇವಸ್ಥಾನದಲ್ಲಿ ಪೂಜೆ ನಡೆಯಿತು.
ಬಳಿಕ ನಡೆದ ರ್ಯಾಲಿಯಲ್ಲಿ ಮಾತನಾಡಿದ ಅಮಿತಾ ಶಾ, ಉತ್ತರ ಪ್ರದೇಶದಲ್ಲಿ ಯೋಗಿ ಗ್ಯಾಂಗ್ಗಳನ್ನು ನಿರ್ನಾಮ ಮಾಡಿದ್ದಾರೆ ಎಂದು ಹೇಳಲು ನನಗೆ ಹೆಮ್ಮೆಯಾಗುತ್ತಿದೆ. ಉತ್ತರ ಪ್ರದೇಶದಲ್ಲಿ ನ್ಯಾಯದ ಆಡಳಿತ ನಡೆಯುತ್ತಿದೆ. ಅವರು ಕೊರೊನಾವನ್ನು ಪರಿಣಾಮಕಾರಿಯಾಗಿ ಎದುರಿಸಿದ್ದಾರೆ ಎಂದು ಶ್ಲಾಘಿಸಿದರು.