ಹೊಸ ವರ್ಷಾಚರಣೆ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ನಡೆದ ಸಾಮೂಹಿಕ ಲೈಂಗಿಕ ದೌರ್ಜನ್ಯ, ಕಮ್ಮನಹಳ್ಳಿ ಘಟನೆ ಬಗ್ಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಮತ್ತೀಗ ಮುಂಬೈನಲ್ಲೂ ಗುರುವಾರ ರಾತ್ರಿ ಇಂತಹದ್ದೇ ಘಟನೆ ನಡೆದಿದೆ.
ಮುಂಬೈನ ತಾರ್ಡಿಯೋ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹೇಯ ಕೃತ್ಯ ನಡೆದಿದ್ದು, ಗೆಳೆಯನಿಗಾಗಿ ಕಾಯುತ್ತ ನಿಂತಿದ್ದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದೆ. ಗೆಳೆಯ ಸ್ಥಳಕ್ಕೆ ಬಂದಾಗ ರಸ್ತೆಯಲ್ಲಿಯೇ ಕುಸಿದು ಬಿದ್ದಿದ್ದ ಯುವತಿಯನ್ನು ಕಂಡಿದ್ದಾನೆ.
ಪೀಡಿತೆಗೆ ಗಂಭೀರ ಗಾಯಗಳಾಗಿದ್ದು ಆಕೆಯನ್ನು ನಾಯರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಈ ಕುರಿತು ಮಾಹಿತಿ ನೀಡಿದ್ದಾರೆ.
ಆರೋಪಿಗಳ ಬಗ್ಗೆ ಇನ್ನುವರೆಗೂ ಯಾವುದೇ ಸುಳಿವು ಸಿಕ್ಕಿಲ್ಲ. ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.