ಮುಖ್ಯಮಂತ್ರಿ ಜೆ.ಜಯಲಲಿತಾ ಆಸ್ಪತ್ರೆಗೆ ದಾಖಲಾಗಿರುವ ಮಧ್ಯೆ, ಜಯಲಲಿತಾ ಕಟ್ಟಾ ಎದುರಾಳಿ ಡಿಎಂಕೆ ಪಕ್ಷದ ಮುಖ್ಯಸ್ಥ ಎಂ.ಕರುಣಾನಿಧಿ ಕೂಡಾ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಳೆದ ಸೆಪ್ಟೆಂಬರ್ 22 ರಿಂದ ಸಿಎಂ ಜಯಲಲಿತಾ ಕೂಡಾ ಅನಾರೋಗ್ಯದ ಹಿನ್ನೆಲೆಯಲ್ಲಿ ನಗರದ ಅಪೋಲೋ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕರುಣಾನಿಧಿ ಪ್ರತಿನಿತ್ಯ ಸೇವಿಸುವ ಮಾತ್ರೆಗಳಿಂದ ಅಲರ್ಜಿಯಾದ ಹಿನ್ನೆಲೆಯಲ್ಲಿ ಅನಾರೋಗ್ಯ ಉಂಟಾಗಿದೆ ಎಂದು ಡಿಎಂಕೆ ಪಕ್ಷದ ವಕ್ತಾರರು ತಿಳಿಸಿದ್ದಾರೆ.
ಕರುಣಾನಿಧಿಯವರಿಗೆ ವಿಶ್ರಾಂತಿ ತೆಗೆದುಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದರಿಂದ, ಅವರನ್ನು ಭೇಟಿ ಮಾಡಲು ಯಾರಿಗೂ ಅವಕಾಶ ನೀಡುತ್ತಿಲ್ಲ ಎಂದು ಡಿಎಂಕೆ ಮುಖಂಡರು ತಿಳಿಸಿದ್ದಾರೆ.
ಏತನ್ಮಧ್ಯೆ, ಜಯಲಲಿತಾ ಬೇಗ ಗುಣಮುಖರಾಗಲಿ ಎಂದು ಹಾರೈಸಿ ಎಐಎಡಿಎಂಕೆ ಪಕ್ಷದ ಕಾರ್ಯಕರ್ತರು ದೇವಾಲಯಗಳಲ್ಲಿ ವಿಶೇಷ ಪೂಜೆಗಳನ್ನು ಹಮ್ಮಿಕೊಂಡಿದ್ದಾರೆ. ಇದೀಗ ಕರುಣಾನಿಧಿ ಬೆಂಬಲಿಗರು ಕೂಡಾ ದೇವಾಲಯಗಳಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲು ಸಿದ್ದತೆ ನಡೆಸುತ್ತಿದ್ದಾರೆ.
ಮೈಸೂರಿನ ಮೇಲುಕೋಟೆಯಲ್ಲಿ ಜನಿಸಿದ 68 ವರ್ಷ ವಯಸ್ಸಿನ ಎಐಎಡಿಎಂಕೆ ಮುಖ್ಯಸ್ಥೆ ಜೆ.ಜಯಲಲಿತಾ, ದುರ್ಗಾ ಮಾತೆಯ ಅವತಾರವಾದ ಚಾಮುಂಜೇಶ್ವರಿ ದೇವಿಯ ಆರಾಧಕರಾಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ